HomeKarnatakaBIG NEWS: ಬಳ್ಳಾರಿ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಪದಾಧಿಕಾರಿಗಳ ಜೊತೆ ಮಾಜಿ ಸಚಿವ ಜನಾರ್ಧನ ರೆಡ್ಡಿ...

BIG NEWS: ಬಳ್ಳಾರಿ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಪದಾಧಿಕಾರಿಗಳ ಜೊತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಭೆ

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಳ್ಳಾರಿ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮಾಜಿ ಸಚಿವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಶಾಸಕ ಜನಾರ್ಧನ ರೆಡ್ಡಿ ಬಿಜೆಪಿಗೆಸೇರ್ಪಡೆಯಾಗಲು ಮುಂದಾಗಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡುವುದಾಗಿ ಜನಾರ್ಧನ ರೆಡ್ಡಿ ಹೇಳಿಕೆ ನೀಡಿದ್ದಾರೆ. ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಬೆನ್ನಲ್ಲೇ ಜನಾರ್ಧನ ರೆಡ್ಡಿ ಇಂದು ಪದಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.

ಬೆಂಗಳೂರಿನ ಪಾರಿಜಾತ ನಿವಸದಲ್ಲಿ ಬೆಳಿಗ್ಗೆ 11 ಗಂಟೆಗೆ ಜನಾರ್ಧನ ರೆಡ್ಡಿ ಪಕ್ಷದ ಪದಾಧಿಕಾರಿಗಳ ಸಭೆ ನಡೆಸಲಿದ್ದು, ಸಭೆ ಬಳಿಕ ಬಿಜೆಪಿ ಸೇರ್ಪಡೆ ಬಗ್ಗೆ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular