HomeKarnatakaಆಸ್ತಿ ಮೌಲ್ಯ 4 ಸಾವಿರ ಕೋಟಿ ರೂ. ಆಗಿದೆ, ಚುನಾವಣೆ ಖರ್ಚಿಗೆ ಸಮಸ್ಯೆ ಆಗದು: ಜನಾರ್ದನ...

ಆಸ್ತಿ ಮೌಲ್ಯ 4 ಸಾವಿರ ಕೋಟಿ ರೂ. ಆಗಿದೆ, ಚುನಾವಣೆ ಖರ್ಚಿಗೆ ಸಮಸ್ಯೆ ಆಗದು: ಜನಾರ್ದನ ರೆಡ್ಡಿ

ಕೊಪ್ಪಳ: ಯಾರನ್ನೂ ಹೆದರಿಸಿ ನಾನು ಹಣ ಹೊಡೆದಿಲ್ಲ, ಸ್ವಂತ ಶ್ರಮದಿಂದ ಆಸ್ತಿ ಗಳಿಸಿದ್ದೇನೆ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ಗಂಗಾವತಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಮಾತನಾಡಿ, ಜೈಲಿನಲ್ಲಿ ಸಣ್ಣ ಕೊಠಡಿಯಲ್ಲಿ ನಾಲ್ಕು ವರ್ಷ ಕಳೆದಿದ್ದೇನೆ. ಯಾರಿಗೂ ಹೆದರುವುದಿಲ್ಲ. ಅಕ್ರಮ ಆಸ್ತಿ ಆರೋಪದಿಂದ ಮುಕ್ತನಾಗಿಯೇ ಉಸಿರು ಬಿಡುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಬಿಐ ಅಧಿಕಾರಿಗಳು ನನ್ನನ್ನು ಬಂಧಿಸಿದ ವೇಳೆ 1,200 ಕೋಟಿ ರೂ. ಆಸ್ತಿ ಜಪ್ತಿ ಮಾಡಿ ಪ್ರಕರಣ ದಾಖಲಿಸಿದ್ದರು. ಜಪ್ತಿಯಾದ ಆಸ್ತಿಯ ಮೌಲ್ಯ 4,000 ಕೋಟಿ ರೂ. ಆಗಿದ್ದು, ಚುನಾವಣೆ ಖರ್ಚಿಗೆ ಯಾವುದೇ ಸಮಸ್ಯೆ ಆಗದು. ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ 16 ದಿನ ಕಳೆಯುವಷ್ಟರಲ್ಲಿ ಸಿಬಿಐ ಆಸ್ತಿ ಮುಟ್ಟುಗಲು ಹಾಕಿಕೊಳ್ಳಲು ಮುಂದಾಗಿದೆ. ಆದರೆ, ಯಾರಿಂದಲೂ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆಗದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular