ಹೈದರಾಬಾದ್: ಶಾಸಕ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಜೈಲುಸೇರುವುದು ಖಚಿತವಾಗಿದೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್ ಸಿಬಿಐ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
ಓಬಳಾಪುರಂ ಮೈನಿಂಗ್ ಕೇಸ್ ನಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯ ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ ಜನಾರ್ಧನ ರೆಡ್ಡಿಗೆ ಮತ್ತೆ ಜೈಲೂಟ ಫಿಕ್ಸ್ ಆಗಿದೆ.
ಅಲ್ಲದೇ ಜನಾರ್ಧನ ರೆಡ್ಡಿ ಅವರ ಶಾಸಕ ಸ್ಥಾನಕ್ಕೂ ಕುತ್ತು ಬರುವ ಸಾಧ್ಯತೆ ದಟ್ಟವಾಗಿದೆ. ಜನಾರ್ಧನ ರೆಡ್ಡಿಗೆ ಜೈಲುಶಿಕ್ಷೆ ಪ್ರಕಟವಾಗುತ್ತಿದ್ದಂತೆ ಬಂಧನ ಭೀತಿ ಎದುರಾಗಿದೆ.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಡಳಿತದ ಅವಧಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಪ್ರಕರಣ ಇದಾಗಿದ್ದು, ಆಂಧ್ರ ಮತ್ತು ಕರ್ನಾಟಕದ ಗಡಿ ಭಾಗದ ಓಬಳಾಪುರಂ ಪ್ರದೇಶದ ಅದಿರಿನ ಅಕ್ರಮ ಗಣಿಕಾರಿಕೆಗೆ ಸಂಬಂಧಿಸಿದಂತೆ ಜನಾರ್ಧನ ರೆಡ್ಡಿ ಅಪರಾಧಿ ಎಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.
ಜನಾರ್ಧನ ರೆಡ್ದಿ ಈ ಕಂಪನಿಯ ಮುಖ್ಯಸ್ಥರಾಗಿದ್ದರು. ಶ್ರೀನಿವಾಸರೆಡ್ಡಿ ಒಎಂಸಿ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಈ ಕಂಪನಿಗೆ ಗಣಿಗಾರಿಕೆ ಮಂಜೂರಾತಿ ನೀಡುವಲ್ಲಿ ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ನಡೆದಿತ್ತು. ಜನಾರ್ರ್ಧನ ರೆಡ್ಡಿ ವಿರುದ್ಧ 29 ಲಕ್ಷ ಟನ್ ಅದಿರು ಲೂಟಿ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಸೇರಿದಂತೆ ಒಟ್ಟು 5 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ.