ಕೊಪ್ಪಳ: ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿಗಾಗಿ ಪೈಪೋಟಿ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಒಪ್ಪಂದ ಆಗಿರುವುದು ನಿಜ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಜನಾರ್ಧನ ರೆಡ್ಡಿ, ರಾಜ್ಯದಲ್ಲಿ ದೇವರಾಜ್ ಅರಸು ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಅಗಿದ್ದರು. ಅವರಿಗಿಂತ ಒಂದು ದಿನ ಹೆಚ್ಚು ಅಧಿಕಾರ ಮಾಡಿ ಇತಿಹಾಸ ಸೃಷ್ಟಿಸಿ ಕೆಳಗಿಳಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರ ಸಂಕಲ್ಪ. ಈ ವಿಚಾರ ನಮ್ಮ ಕಿವಿಗೆ ಬಿದ್ದಿದೆ ಎಂದರು.
ಹಾಗಾಗಿ ಸಿದ್ದರಾಮಯ್ಯನವರ ಸಂಕಲ್ಪವೂ ನೆರವೇರಲಿ. ಜೊತೆಗೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದೂ ನೆರವೇರಲಿ ಎಂದು ಹೇಳಿದ್ದಾರೆ. ಒಪ್ಪಂದ ಆಗಿರುವುದನ್ನು ಡಿ.ಕೆ.ಶಿವಕುಮಾರ್ ಮಾರ್ಮಿಕ ಮಾತುಗಳಲ್ಲಿ ಹೇಳಿದ್ದಾರೆ. ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅದರರ್ಥ ಅಧಿಕಾರ ಹಂಚಿಕೆ ಮಾತುಕತೆ ಆಗಿದೆ ಎಂದು. ಸಂದೂರು ಉಪಚುನಾವಣೆ ಸಂದರ್ಭದಲ್ಲಿಯೇ ಈ ಮಾತನ್ನು ಹೇಳಿದ್ದರು ಎಂದರು.
ಸುಸೂತ್ರವಾಗಿ ಅಧಿಕಾರ ಹಂಚಿಕೆಯಾಗುತ್ತದೆ. ನನ್ನ ಅನುಭವದ ಪ್ರಕಾರ ಸಿದ್ದರಾಮಯ್ಯ ಸುಲಭವಾಗಿಯೇ ಅಧಿಕಾರ ಬಿಟ್ಟುಕೊಡುತ್ತಾರೆ. ಸುಲಭವಾಗಿಯೇ ಅಧಿಕಾರ ಹಸ್ತಾಂತರವಾಗಲಿದೆ ಎಂದು ಹೇಳಿದ್ದಾರೆ.
