HomeKarnatakaನಮ್ಮ ಮನೆ ಮುಂದೆ ಪ್ರತಿಭಟನೆ ಮಾಡಿಸುವುದು ಬಿಟ್ಟು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಇನ್ನೇನು ಮಾಡಿಸಲು ಸಾಧ್ಯ?...

ನಮ್ಮ ಮನೆ ಮುಂದೆ ಪ್ರತಿಭಟನೆ ಮಾಡಿಸುವುದು ಬಿಟ್ಟು ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಇನ್ನೇನು ಮಾಡಿಸಲು ಸಾಧ್ಯ? ಜನಾರ್ಧನ ರೆಡ್ಡಿ ಆಕ್ರೋಶ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹತಾಶರಾಗಿದ್ದಾರೆ. ಅವರಿಗೆ ತಮ್ಮ ಕಾರ್ಯಕರ್ತರಿಂದ ಪ್ರತಿಭಟನೆಗಳನ್ನು ಮಾಡಿಸುವುದು ಬಿಟ್ಟರೆ ಬೇರೇನೂ ಮಾಡಲು ಸಾಧ್ಯವಿಲ್ಲ ಎಂದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.

ಜನವರಿ 17ರಂದು ಬಳ್ಳಾರಿಯಲ್ಲಿ ನಡೆದಿದ್ದ ಬೃಹತ್ ಸಮಾವೇಶದಲ್ಲಿ ಮಾತನಾಡಿದ್ದ ಜನಾರ್ಧನ ರೆಡ್ಡಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಏಕವಚನದಲ್ಲಿ ವಾಕ್ಪ್ರಹಾರ ನಡೆಸಿದ್ದರು. ಜನಾರ್ಧನ ರೆಡ್ಡಿ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಜನವರಿ 18ರಂದು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ರೆಡ್ದಿ ನಿವಾಸದ ಬಳಿ ಪ್ರತಿಭಟನೆ ನಡೆಸಿ, ಮನೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಜನಾರ್ಧನ ರೆಡ್ದಿ, ಡಿ.ಕೆ.ಶಿವಕುಮಾರ್ ಹತಾಶರಾಗಿದ್ದಾರೆ. ನಿನ್ನೆ ನನ್ನ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆದಿದೆ. ಡಿಕೆಶಿಗೆ ನಮ್ಮ ಮನೆ ಮುಂದೆ ಪ್ರತಿಭಟನೆ ಮಾಡಿಸಲಷ್ಟೇ ಸಾಧ್ಯ. ಅವರಿಂದ ಬೇರೆ ಇನ್ನೇನು ಮಾಡಿಸಲು ಸಾಧ್ಯವಿದೆ? ಬಳ್ಳಾರಿಯಲ್ಲಿ ಗಲಾಟೆ ಮಾಡಿ ನನ್ನನ್ನು ಟಾರ್ಗೆಟ್ ಮಾಡಿ ಕಾಂಗ್ರೆಸ್ ಶಾಸಕನ ಬೆಂಬಲಿಗರಿಂದಲೇ ನನ್ನ ಮೇಲೆ ಫೈರಿಂಗ್ ಮಾಡಿದ್ದಾರೆ. ದೂರು ನೀಡಲು ಹೋದರೆ ಸೂಕ್ತವಾಗಿ ಸ್ಪಂದಿಸಿಲ್ಲ. ಈವರೆಗೂ ಶಾಸಕ ಭರತ್ ರೆಡ್ಡಿಯನ್ನು ಬಂಧಿಸಿಯೂ ಇಲ್ಲ, ಆತನ ವಿರುದ್ಧ ಯಾವುದೇ ಕ್ರಮಗಳನ್ನೂ ಕೈಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಪೋಕ್ಸೋ ಪ್ರಕರಣದ ಸಂತ್ರಸ್ತೆ ಹೆಸರನ್ನು ಬಹಿರಂಗ ಪಡಿಸಿದ್ದಕ್ಕೆ ಮಾಜಿ ಸಚಿವ ಆಪ್ತ ಶ್ರೀರಾಮುಲು ವಿರುದ್ಧ ಎಫ್ಐಆರ್ ದಾಖಲಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಜನಾರ್ಧನ ರೆಡ್ಡಿ, ನೋಟಿಸ್ ಬಂದರೆ ಈ ಬಗ್ಗೆ ನಾವೂ ಕಾನೂನು ಪ್ರಕಾರವಾಗಿ ಮುಂದುವರೆಯುತ್ತೇವೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular