BREAKING: ಶಿಕ್ಷೆ ಪ್ರಮಾಣ ಕಡಿಮೆ ಮಾಡುವಂತೆ ಜನಾರ್ಧನ ರೆಡ್ದಿ ಸಲ್ಲಿಸಿದ ಮನವಿ ತಿರಸ್ಕರಿಸಿದ ಕೋರ್ಟ್: ರೆಡ್ದಿಗೆ ಮತ್ತೆ ಜೈಲುಶಿಕ್ಷೆ ಫಿಕ್ಸ್!

ಹೈದರಾಬಾದ್: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಗಾಲಿ ಜನಾರ್ಧನ ರೆಡ್ದಿಗೆ ಹೈದರಾಬಾದ್ ಸಿಬಿಐ ಕೋರ್ಟ್ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಕೋರ್ಟ್ ಶಿಕ್ಷೆ ಪ್ರಮಾಣ ಪ್ರಕಟಿಸುತ್ತಿದ್ದಂತೆ ಜನಾರ್ಧನ ರೆಡ್ಡಿ, ಈಗಾಗಲೇ ನಾನು ನಾಲ್ಕು ವರ್ಷ ಜೈಲು ಶಿಕ್ಷೆ ಅನುಭವಿಸಿದ್ದೇನೆ. ನಾನೊಬ್ಬ ಶಾಸಕ. ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. 7 ವರ್ಷದ ಜೈಲು ಶಿಕ್ಷೆ ಪ್ರಮಾಣವನ್ನು ಕಡಿಮೆ ಮಾಡುವಂತೆ ಮನವಿ ಮಾಡಿದ್ದಾರೆ.

ಈ ವೇಳೆ ನ್ಯಾಯಾಲಯ ಜನಾರ್ಧನ ರೆಡ್ದಿ ಮನವಿಯನ್ನು ತಿರಸ್ಕರಿಸಿದೆ. ಅಲ್ಲದೇ ನಿಮಗೆ ಯಾಕೆ ಜೀವಾವಧಿ ಶಿಕ್ಷೆ ನೀಡಬಾರದು? 10 ವರ್ಷಗಳ ಜೈಲು ಶಿಕ್ಷೆಗೂ ನೀವು ಅರ್ಹರು. ಹಾಗಾಗಿ 7 ವರ್ಷ ಜೈಲು ಶಿಕ್ಷೆ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದೆ. ಜನಾರ್ಧನ ರೆಡ್ದಿ ಸೇರಿದಂತೆ ಒಟ್ಟು 5 ಅಪರಾಧಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ತೀರ್ಪು ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read