HomeKarnatakaBIG NEWS: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ರಾಹುಲ್ ಗಾಂಧಿ ಕಾಯ್ತಿದ್ದಾರೆ; ಹೊಸ ಬಾಂಬ್ ಸಿಡಿಸಿದ...

BIG NEWS: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಕೆಳಗಿಳಿಸಲು ರಾಹುಲ್ ಗಾಂಧಿ ಕಾಯ್ತಿದ್ದಾರೆ; ಹೊಸ ಬಾಂಬ್ ಸಿಡಿಸಿದ ಜನಾರ್ಧನ ರೆಡ್ಡಿ

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ಕೊಪ್ಪಳದ ಹ್ಯಾಟಿ ಮುಂಡರಗಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಜನಾರ್ಧನ ರೆಡ್ಡಿ, ಕಾಂಗ್ರೆಸ್ ಹೈಕಮಾಂಡ್ ಗೆ ದುಡ್ಡು ಕೊಡುವ ಸಿಎಂ ಬೇಕಾಗಿದ್ದಾರೆ. ಹೀಗಾಗಿ ಚುನಾವಣೆ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ ಎಂದರು.

ಸಿದ್ದರಾಮಯ್ಯ ಯಾರ ಬಳಿಯೂ ದುಡ್ಡು ತೆಗೆದುಕೊಳ್ಳಲ್ಲ, ಯಾರಿಗೂ ಕೂದ ದುಡ್ಡು ಕೊಡಲ್ಲ. ಆದರೆ ಕಾಂಗ್ರೆಸ್ ಹೈಕಮಾಂಡ್ ಗೆ ದುಡ್ಡು ಕೊಡುವ ಸಿಎಂ ಬೇಕಾಗಿದ್ದಾರೆ. ಅವರಿಗೆ ಡಿ.ಕೆ.ಶಿವಕುಮಾರ್ ಅವರಂತಹ ಮುಖ್ಯಮಂತ್ರಿಗಳು ಬೇಕಾಗಿದ್ದಾರೆ. ಅದಕ್ಕೆ ಡಿ.ಕೆ.ಶಿವಕುಮಾರ್ ರನ್ನು ಸಿಎಂ ಮಾಡಲು ರಾಹುಲ್ ಗಾಂಧಿ ಕಾಯುತ್ತಿದ್ದಾರೆ. ಮಂಡ್ಯದಲ್ಲಿ ನಡೆದ ಸಮಾವೇಶದಲ್ಲೇ ರಾಹುಲ್ ಗಾಂಧಿ ಈ ಸಂದೇಶ ರವಾನಿಸಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular