HomeLatest NewsBREAKING: ಶಾಸಕ ಜನಾರ್ಧನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ: ಹಲವರು ಪೊಲೀಸ್ ವಶಕ್ಕೆ

BREAKING: ಶಾಸಕ ಜನಾರ್ಧನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ: ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು: ಶಾಸಕ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಶಾಸಕ ಜನಾರ್ಧನ ರೆಡ್ಡಿ ಅವರ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ನಿವಾಸದ ಮುಂದೆ ಏಕಾಏಕಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ಗಲಾಟೆ-ಫೈರಿಂಗ್ ಪ್ರಕರಣ ಖಂಡಿಸಿ ನಿನ್ನೆ ಬಳ್ಳಾರಿಯಲ್ಲಿ ಬಿಜೆಪಿ ನಾಯಕರು ಬೃಹತ್ ಸಮಾವೇಶ ನಡೆಸಿದ್ದರು. ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ್ದ ಶಾಸಕ ಜನಾರ್ಧನ ರೆಡ್ಡಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಬಳ್ಳಾರಿ ಕಾಂಗ್ರೆಸ್ ನಾಯಕರು ನನ್ನನ್ನು ಟಾರ್ಗೆಟ್ ಮಾಡಿ ಗುಂಡಿನ ದಾಳಿ ನಡೆಸಿದರೂ ನನಗೆ ರಕ್ಷಣೆ ನೀಡಲು ಆಗಿಲ್ಲ. ನೀನ್ಯಾವ ರೀತಿ ಡಿಸಿಎಂ? ಡಿಸಿಎಂ ಆಗಿ ಏನು ಕಿಸಿದಿದ್ದೀಯಾ? ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಜನಾರ್ಧನ ರೆಡ್ಡಿಯ ಪದಬಳಕೆಗೆ ಸಿಡಿದೆದ್ದ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇಂದು ಜನಾರ್ಧನ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಮನೋಹರ್ ನೇತೃತ್ವದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಯಲ್ಲಿರುವ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಎಚ್ಚೆತ್ತ ಪೊಲೀಸರು ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular