HomeLatest NewsBIG NEWS: ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ: 884 ಕೋಟಿ ನಷ್ಟ ವಸೂಲಿ ಮಾಡುವಂತೆ ಪತ್ರ:...

BIG NEWS: ಜನಾರ್ಧನ ರೆಡ್ಡಿಗೆ ಮತ್ತೆ ಸಂಕಷ್ಟ: 884 ಕೋಟಿ ನಷ್ಟ ವಸೂಲಿ ಮಾಡುವಂತೆ ಪತ್ರ: ವರದಿ ತರಿಸಿಕೊಳ್ಳಲು ಮುಂದಾದ ಸರ್ಕಾರ

ಬಳ್ಳಾರಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜನಾರ್ಧನ ರೆಡ್ಡಿ ಅವರಿಂದಲೇ 884 ಕೋಟಿ ನಷ್ಟ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಪತ್ರ ಬರೆದಿದ್ದು, ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಸಿಬಿಐ ವಿಶೇಷ ನ್ಯಾಯಾಲಯದಲ್ಕಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ನಡೆಸಿರೋದು ಸಾಬೀತಾಗಿದ್ದು, ಅಕ್ರಮವಾಗಿ 29 ಲಕ್ಷ ಮೆಟ್ರಿಕ್ ಟನ್ ಕಬ್ಬಿಣದ ಅದಿರು ಸಾಗಾಟ‌ದ ಮೂಲಕ ಸರ್ಕಾರದ ಬೊಕ್ಕಸಕ್ಕೆ 884 ಕೋಟಿ ನಷ್ಟ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಆ ಹಣವನ್ನು ಅವರಿಂದಲೇ ವಸೂಲಿ ಮಾಡುವಂತೆ ಟಪಾಲ್ ಗಣೇಶ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವರದಿ ತರಿಸಿಕೊಳ್ಳಲು ಮುಂದಾಗಿದೆ. ಸಂಡೂರು ಕ್ಲಸ್ಟರ್‌ನಲ್ಲಿ ರೆಡ್ಡಿ ನಡೆಸಿರುವ ಗಣಿಗಾರಿಕೆ ಕುರಿತು ವರದಿ ನೀಡಲು ಅರಣ್ಯ, ಜೀವಿ ಪರಿಸ್ಥಿತಿ ಮತ್ತು ಪರಿಸರ ಇಲಾಖೆಯ ಅಧೀನ ಕಾರ್ಯದರ್ಶಿ, ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಈ ಮೂಲಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular