HomeLatest NewsBIG NEWS: ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ ವಾಗ್ದಾಳಿ

BIG NEWS: ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ: ಶಾಸಕ ಜನಾರ್ಧನ ರೆಡ್ಡಿ ವಾಗ್ದಾಳಿ

ಕೊಪ್ಪಳ: ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಅಧಿಕಾರ ಹಸ್ತಾಂತರವಾಗಬಹುದು. ಡಿಸಿಎಂ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಬಹುದು ಎಂದು ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ಸಿಎಂ ಸಿದ್ದರಾಮಯ್ಯ ಯಾವ ಕ್ಷಣದಲ್ಲಿ ಬೇಕಾದರೂ ಕುರ್ಚಿಯಿಂದ ಇಳಿದು, ಅಧಿಕಾರ ಬಿಟ್ಟುಕೊಡಬಹುದು ಎಂದು ತಿಳಿಸಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಇಬ್ಬರು ತಲೆಕೆಟ್ಟ ಮಂತ್ರಿಗಳಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಒಬ್ಬ ಪ್ರಿಯಾಂಕ್ ಖರ್ಗೆ, ಇನ್ನೊಬ್ಬ ಸಂತೋಷ್ ಲಾಡ್. ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಮಾತನಾಡಿದರೆ ದೊಡ್ಡವರಾಗುತ್ತೇವೆ ಅಂದುಕೊಂಡಿದ್ದಾರೆ. ಇವರಿಗೆ ಕಾಲವೇ ದೊಡ್ಡ ಪ್ರಮಾಣದಲ್ಲಿ ಉತ್ತರ ಕೊಡಲಿದೆ. ಅಮಾಯಕರಿಂದ ವೋಟ್ ಹಾಕಿಸಿಕೊಂಡು ಯಾವುದೇ ಅಭಿವೃದ್ಧಿ ಮಾಡಿಲ್ಲ. ಆರ್.ಎಸ್.ಎಸ್ ಪಥಸಂಚಲನಕ್ಕೆ ಅಡ್ಡಿಪಡಿಸಿದರು. ಪ್ರಿಯಾಂಕ್ ಖರ್ಗೆ ತಂದೆ ಅವರಿಗೆ ಬುದ್ಧಿ ಹೇಳುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ. ಪ್ರಿಯಾಂಕ್ ಖರ್ಗೆ ಇತಿಮಿತಿ ಇಲ್ಲದೇ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular