HomeKarnatakaವಾಲ್ಮೀಕಿ ಹಗರಣದ ಸತ್ಯ ಹೇಳಬಹುದೆಂಬ ಭಯಕ್ಕೆ ನಾಗೇಂದ್ರಗೆ ಮಂತ್ರಿಗಿರಿ ನೀಡಿದ್ದಾರೆ: ಜನಾರ್ಧನ ರೆಡ್ಡಿ ಗಂಭೀರ ಆರೋಪ

ವಾಲ್ಮೀಕಿ ಹಗರಣದ ಸತ್ಯ ಹೇಳಬಹುದೆಂಬ ಭಯಕ್ಕೆ ನಾಗೇಂದ್ರಗೆ ಮಂತ್ರಿಗಿರಿ ನೀಡಿದ್ದಾರೆ: ಜನಾರ್ಧನ ರೆಡ್ಡಿ ಗಂಭೀರ ಆರೋಪ

ಬಳ್ಳಾರಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ವೇಳೆ ವಾಲ್ಮೀಕಿ ನಿಗಮದ ಹಗರಣದಿಂದ ರಾಜೀನಾಮೆ ನೀಡಿದ್ದ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಬಿ. ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ನೀಡಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಇದೇ ವಿಚಾರವಾಗಿ ಮಾತನಾಡಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ, ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಮಾತ್ರವಲ್ಲದೇ ಬಹುತೇಕ ಪಾಲುದಾರ ಇದ್ದಾರೆ ಎಂದು ತಾನು ಹೇಳಿದ್ದು ಈಗ ನಿಜವಾಗಿದೆ. ನಾಗೇಂದ್ರ ಮುಖಕ್ಕೆ ಬೆಣ್ಣೆ ಹಚ್ಚಿರೋದು ತೋರಿಸಿ, ಉಳಿದವರು ಹಿಂದೆ ಲೂಟಿ ಹೊಡೆದಿದ್ದಾರೆ. ನಾಗೇಂದ್ರರಿಗೆ 10-20 ಪರ್ಸೆಂಟ್ ಕೊಟ್ಟು, ಉಳಿದ ಹಣವನ್ನು ಬಳ್ಳಾರಿ, ತೆಲಂಗಾಣ ಮತ್ತು ಗೋವಾ ಚುನಾವಣೆಗಳಿಗೆ ಬಳಸಿದ್ದಾರೆ. ಒಂದೊಮ್ಮೆ ನಾಗೇಂದ್ರರಿಗೆ ಮಂತ್ರಿ ಸ್ಥಾನ ನೀಡದಿದ್ದರೆ ಅವರು ಅಪ್ರೂವಲ್ ಆಗಿ ಬಿಡುತ್ತಿದ್ದರು ಎಂಬ ಕಾರಣಕ್ಕೆ ಹುದ್ದೆ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಗರಣದ ದುಡ್ಡು ಕಾಂಗ್ರೆಸ್ ಪಕ್ಷದವರು ತಿಂದು ತನ್ನ ಜೈಲಿಗೆ ಹಾಕಿಸಿದ್ರು ಎಂದು ಕೋರ್ಟ್ ಮುಂದೆ ನಾಗೇಂದ್ರ ಹೇಳುತ್ತಿದ್ದರು. ಸತ್ಯ ಹೇಳುವ ಭಯಕ್ಕೆ ಅವರನ್ನು ಮಂತ್ರಿ ಮಾಡಿದ್ದಾರೆ. ನಾಗೇಂದ್ರ ಬಗ್ಗೆ ತನಗೂ ಅನುಕಂಪ ಇದೆ. ಪಾಪ 10-20 ಪರ್ಸೆಂಟ್ ದುಡ್ಡು ತಿಂದು ಜೈಲಿಗೆ ಹೋದರು. ಆದರೆ ಅವರು ಬುದ್ಧಿವಂತರಾಗಿದ್ದು, ಯಾರ್ಯಾರು ಹಣ ತಿಂದಿದ್ದಾರೆ ಎಂಬ ಬಗ್ಗೆ ಪಟ್ಟಿ ಮಾಡಿ ಕೋರ್ಟ್​​ಗೆ ಕೊಡುತ್ತೇನೆ ಎಂದಿದ್ದಾರೆ. ಹೀಗಾಗಿಯೇ ಕಾಂಗ್ರೆಸ್​​ ಅವರಿಗೆ ಮತ್ತೆ ಮಣೆ ಹಾಕಿದೆ ಎಂದಿದ್ದಾರೆ.
ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಮಾಡಿದ್ದಾರೆ.

ಇನ್ನೊಂದೆಡೆ ನಾಅಗೇಂದ್ರ ಅವರನ್ನು ಮತ್ತೆ ಮಂತ್ರಿ ಮಾಡಿರುವುದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಕೂಡ ಕಿಡಿಕಾರಿದ್ದಾರೆ. ನಾಗೇಂದ್ರರನ್ನು ವಾಷಿಂಗ್​​ ಮಷಿನ್​​ಗೆ ಹಾಕಿ ಕ್ಲೀನ್​​ ಮಾಡಿ ಮತ್ತೆ ಮಾಂತ್ರಿಯನ್ನಾಗಿ ಮಾಡಿದ್ದಾರೆ. ತಕ್ಷಣ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular