ಕೊಪ್ಪಳ: ಆರ್.ಎಸ್.ಎಸ್ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಜನಾರ್ಧನ ರೆಡ್ಡಿ, ಗೃಹ ಸಚಿವರು ಗೃಹ ಸಚಿವರಂತೆ ನಡೆದುಕೊಳ್ಳುವುದನ್ನು ಬಿಟ್ಟು ಹುಚ್ಚನಂತೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜನಾರ್ಧನ ರೆಡ್ಡಿ, ಆರ್.ಎಸ್.ಎಸ್ ಪಥಸಂಚಲನಕ್ಕೆ ಅನುಮತಿ ಪಡೆದುಕೊಂಡಿರಬೇಕು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿ, ತಾನು ಪ್ರತಿದಿನ ಸುದ್ದಿಯಲ್ಲಿರಬೇಕು ಎಂಬ ಚಟ ಪ್ರಿಯಾಕ್ ಖರ್ಗೆ ಅವರಿಗೆ. ಹಾಗಾಗಿ ಆರ್.ಎಸ್.ಎಸ್ ಬಗ್ಗೆ ನಿರಂತರವಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದರು.
ಸಿಎಂ ಡಿ.ಕೆ.ಶಿವಕುಮಾರ್ ಅವರು ಗೃಹ ಸಚಿವ ಸ್ಥಾನದಂತಹ ದೊಡ್ದ ಹುದ್ದೆಯನ್ನು ಏಕಾಏಕಿ ಪ್ರಿಯಾಂಕ್ ಖರ್ಗೆ ಅವರಿಗೆ ನೀಡಿದ್ದಾರೆ. ತನ್ನ ಹುದ್ದೆಯ ಜವಾಬ್ದಾರಿಯನ್ನು ಅರಿತು ಗೃಹ ಸಚಿವರಂತೆ ಕೆಲಸ ಮಾಡುವುದನ್ನು ಬಿಟ್ಟು ಅನವಶ್ಯಕ ಹೇಳಿಕೆಗಳನ್ನು ನೀಡುತ್ತಾ, ಪ್ರತಿದಿನ ಆರ್.ಎಸ್.ಎಸ್ ಬಗ್ಗೆ ಟೀಕೆ ಮಾಡುತ್ತಿದ್ದಾರೆ.
15 ದಿನ ಅವರನ್ನು ಅವರಪಾಡಿಗೆ ಬಿಡಬೇಕು. 15 ದಿನ ಬಿಟ್ಟು ಪ್ರಿಯಾಂಕ್ ಖರ್ಗೆ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸೊಪತ್ರೆಗೆ ದಾಖಲಿಸಿ ಅವರ ತಲೆ ಸರಿಯಾಗಿದೆಯಾ ನೋಡಬೇಕು. ಒಬ್ಬ ಗೃಹ ಸಚಿವರಾಗಿ ಕೆಲಸ ಮಾಡುವುದನ್ನು ಬಿಟ್ತು ಹುಚ್ಚನಂತೆ ಮಾತನಾಡುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್.ಎಸ್.ಎಸ್ ಗೆ ಈವರೆಗೂ ಯಾರಿಂದಲೂ ಏನೂ ಮಾಡಲು ಸಾಧ್ಯವಾಗಿಲ್ಲ. ಇನ್ನು ಪ್ರಿಯಂಕ್ ಖರ್ಗೆ ಅವರಿಂದ ಏನು ಮಾಡಲು ಸಾಧ್ಯ? ಏನೂ ಮಾಡಲು ಆಗಲ್ಲ ಎಂದು ಗೊತ್ತಿದ್ದೂ ಅನಾವಶ್ಯವಕವಾಗಿ ಮಾತನಾಡುತ್ತಿದ್ದಾರೆ ಎಂದರು.

