BIG NEWS: ಬಿಜೆಪಿಗೆ ಮರಳುವುದನ್ನು ಕನಸು ಮನಸಲ್ಲೂ ಯೋಚಿಸಲ್ಲ; ಅದು ಮುಗಿದ ಅಧ್ಯಾಯ ಎಂದ ಗಾಲಿ ಜನಾರ್ಧನ ರೆಡ್ಡಿ

ಬೆಂಗಳೂರು: ಕೆಆರ್ ಪಿಪಿ ಶಾಸಕ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರನ್ನು ಮತ್ತೆ ಬಿಜೆಪಿಗೆ ಸೆಳೆಯುವ ಯತ್ನಗಳು ನಡೆಯುತ್ತಿವೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಜನಾರ್ಧನ ರೆಡ್ಡಿ, ಬಿಜೆಪಿ ಜೊತೆ ನನ್ನ ಸಂಬಂಧ ಮುಗಿದ ಅಧ್ಯಾಯ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮತನಾಡಿದ ಜನಾರ್ಧನ ರೆಡ್ಡಿ, ಬಿಜೆಪಿಗೆ ಮರಳಿ ಹೋಗುವುದನ್ನು ನಾನು ಕನಸು ಮನಸಲ್ಲೂ ಯೋಚಿಸಲ್ಲ. ಅದು ಮುಗಿದ ಅಧ್ಯಾಯ ಎಂದು ಸ್ಪಷ್ಟ ಪಡಿಸಿದರು.

ಕೆಆರ್ ಪಿಪಿ ಪಕ್ಷ ಸ್ಥಾಪಿಸುವಾಗ ಯಾರೆಲ್ಲ ಎಷ್ಟೇ ಪ್ರಯತ್ನಿಸಿದರೂ ನಾನು ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ. ಸ್ವತಂತ್ರವಾಗಿಯೇ ಸ್ಪರ್ಧಿಸಿ ಗೆದ್ದಿದ್ದೇನೆ. ಸ್ವತಂತ್ರವಾಗಿಯೇ ಮುನ್ನಡೆಯುತ್ತೇನೆ ಎಂದು ತಿಳಿಸಿದರು.

ಇನ್ನು ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲ್ಲ. ಆದರೆ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕೆಲಸ ಮಾಡುತ್ತೇನೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read