ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ `ಜನತಾದರ್ಶನ’ ಕಾರ್ಯಕ್ರಮ : ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಸಾರ್ವಜನಿಕರ ಸಮಸ್ಯೆಗೆ ಪರಿಹಾರ ನೀಡಲು  ಸಾರ್ವಜನಿಕರು ಮುಖ್ಯಮಂತ್ರಿ, ಸಚಿವರ ಭೇಟಿಗೆ ಬೆಂಗಳೂರು ಹೋಗುವುದನ್ನು ‌ತಪ್ಪಿಸಿ ಜಿಲ್ಲಾ ಹಂತದಲ್ಲಿಯೇ ಪರಿಹಾರ ಕಲ್ಪಿಸಲು ರಾಜ್ಯ ಸರ್ಕಾರ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಿದ್ದು,ಇಂದು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.

ಇಂದು ಜಿಲ್ಲಾ ಉಸ್ತುವಾರಿ ಸಚಿವರು ಜನರ ಸಮಸ್ಯೆ ಆಲಿಸಲಿದ್ದಾರೆ. ಪಂಚ ಗ್ಯಾರಂಟಿಯಲ್ಲಿ 4 ಗ್ಯಾರಂಟಿ ಯಶಸ್ವಿಯಾಗಿ ಅನುಷ್ಠಾನಕ್ಕೆ ತಂದಿರುವ  ರಾಜ್ಯ ಸರ್ಕಾರ, ಇದೀಗ ಜನರ ಬಳಿಗೆ ಧಾವಿಸಿ ಅವರ ದೂರು, ದುಮ್ಮಾನುಗಳಿಗೆ ಕಿವಿಯಾಗುವತ್ತ ಹೆಜ್ಜೆ ಇಟ್ಟಿದೆ.”ಜನತಾ ದರ್ಶನ” ಕಾರ್ಯಕ್ರಮ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆ ವರೆಗೆ ನಡೆಯಲಿದೆ.

ಸಾರ್ವಜನಿಕರಿಗೆ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸಲು ಆಹಾರ, ಕೃಷಿ‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್, ರೇಷ್ಮೆ , ತೋಟಗಾರಿಕೆ, ಕಾರ್ಮಿಕ, ಸಂಚಾರಿ ಪೊಲೀಸ್, ಕಂದಾಯ ಹೀಗೆ ಪ್ರಮುಖ 20ಕ್ಕೂ ಹೆಚ್ಚು ಇಲಾಖೆಯ ಮಳಿಗೆ ಹಾಕಲಾಗುತ್ತದೆ. ಪಡಿತರ ಚೀಟಿ ತಿದ್ದುಪಡಿ, ಆಧಾರ್, ಕೆ.ವೈ.ಸಿ., ವೋಟರ್ ಐ.ಡಿ, ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ಇನ್ನಿತರ ಯೋಜನೆಗಳ ತಾಂತ್ರಿಕ‌ ಸಮಸ್ಯೆ  ಬಗೆಹರಿಸಲು ಸಿಬ್ಬಂದಿಗಳು ಸ್ಥಳದಲ್ಲಿ ಇರಲಿದ್ದಾರೆ. ಕುಂದುಕೊರತೆ ಅರ್ಜಿ ಸ್ವೀಕಾರಕ್ಕೆ 10-15 ಕೌಂಟರ್ ತೆರೆಯಲಾಗುತ್ತದೆ.

ಪಿಂಚಣಿ ಆದೇಶ, ಯೋಜನೆಗಳ ಮಂಜೂರಾತಿ ಪತ್ರ ಸೇರಿದಂತೆ ವಿವಿಧ ಇಲಾಖೆಯ ಯೋಜನೆಯಡಿ ಸರಕು-ಸಾಮಗ್ರಿ ವಿತರಣೆ ಸೌಲಭ್ಯವನ್ನು ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ವಿತರಿಸಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read