Janata Darshan : 20 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದ ವೃದ್ಧ ರೈತನ ಸಮಸ್ಯೆಗೆ ಸಿದ್ದರಾಮಯ್ಯ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ.

ನರಸಿಂಹಮೂರ್ತಿ ಎಂಬುವವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಬನವತಿ ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ಸಾಗುವಳಿ ಮಾಡುತ್ತಿದ್ದು, ಜೀವನ ನಿರ್ವಹಣೆಗಾಗಿ ನಂಬಿರುವ ಜಮೀನಿಗೆ ಖಾತೆ ಮಾಡಿಕೊಟ್ಟಿಲ್ಲ ಎಂದು ಇಂದಿನ ಜನತಾ ದರ್ಶನದಲ್ಲಿ ಮನವಿ ಸಲ್ಲಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಕೂಡಲೇ ಕ್ರಮ ವಹಿಸುವಂತೆ ಸೂಚಿಸಿ, ವಯೋವೃದ್ಧ ರೈತನ ಸಂಕಷ್ಟಕ್ಕೆ ನೆರವಾದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read