Janata Darshan : ʻಅನುಕಂಪದ ಉದ್ಯೋಗʼಕ್ಕೆ ಮನವಿ ಮಾಡಿದ ಯುವತಿ : ತಕ್ಷಣ ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ.

ಬೆಳಗಾವಿಯ ಉಜ್ಮಾ ಬಾನು ಎಂಬವರು ತಮ್ಮ ತಂದೆ KUWSSB ಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕರ್ತವ್ಯದ ವೇಳೆ ಮೃತಪಟ್ಟಿದ್ದಾರೆ. ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ಬಗ್ಗೆ ಮೊದಲಿಗೆ ಹುದ್ದೆಗಳು ಖಾಲಿ ಇಲ್ಲವೆಂದು ತಿಳಿಸಲಾಗಿತ್ತು. ನಂತರ ಅಪ್ರಾಪ್ತ ವಯಸ್ಕರಾದ್ದರಿಂದ ಉದ್ಯೋಗ ನೀಡಲು ಅವಕಾಶವಿಲ್ಲ ಎಂದು ತಿಳಿಸಲಾಗಿತ್ತು. ನಿಯಮಾನುಸಾರ ಅವರು ವಯಸ್ಕರಾದ ನಂತರ ಎರಡು ವರ್ಷಗಳೊಳಗೆ ಅರ್ಜಿಸಲ್ಲಿಸಲು ಅವಕಾಶವಿರುವುದರಿಂದ ಉದ್ಯೋಗ ದೊರಕಿಸುವಂತೆ ಜನತಾ ದರ್ಶನದಲ್ಲಿ ಕೋರಿದರು.

ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು KUWSSB ಅಧಿಕಾರಿಗಳಿಗೆ ಸೂಚಿಸಿ, ನೊಂದ ಜೀವಕ್ಕೆ ನೆರವಿನ ಹಸ್ತ ಚಾಚಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read