HomeKarnatakaJanata Darshana : ಜನತಾ ದರ್ಶನದಲ್ಲಿ ಸಮಸ್ಯೆ ಹೇಳಿಕೊಂಡ 96 ವರ್ಷದ ರೈತನಿಗೆ ಸಿಎಂ ಸ್ಥಳದಲ್ಲೇ...

Janata Darshana : ಜನತಾ ದರ್ಶನದಲ್ಲಿ ಸಮಸ್ಯೆ ಹೇಳಿಕೊಂಡ 96 ವರ್ಷದ ರೈತನಿಗೆ ಸಿಎಂ ಸ್ಥಳದಲ್ಲೇ ಪರಿಹಾರ!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ.

ಮಂಡ್ಯ ಜಿಲ್ಲೆಯ 96 ವರ್ಷದ ಪರಂಧಾಮಯ್ಯ ಅವರು ನಾಗಮಂಗಲದಿಂದ ತಾಳವಾಡಿಯ ಮಾರ್ಗ ಮಧ್ಯದಲ್ಲಿ ಜಮೀನು ಹೊಂದಿದ್ದು, ವ್ಯವಸಾಯ ಮಾಡುವ ಜಮೀನನ್ನು ಬೈಪಾಸ್ ಗಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ಜನತಾ ದರ್ಶನದಲ್ಲಿ ದೂರು ನೀಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಂಡ್ಯ ಜಿಲ್ಲಾಧಿಕಾರಿಗಳಿಗೆ ಆನ್ ಲೈನ್ ಮೂಲಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೂಡಲೇ ಸೂಕ್ತ ಕ್ರಮ ವಹಿಸುವಂತೆ ಸೂಚಿಸಿದರು.

96 ವರ್ಷದ ಪರಂದಾಮಯ್ಯ ಅವರ ಜೀವನೋತ್ಸಾಹಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಇನ್ನಷ್ಟು ಕಾಲ ಹೀಗೆಯೇ ಆರೋಗ್ಯವಾಗಿರಿ ಎಂದು ಶುಭ ಕೋರಿದರು.

For Latest News Updates, Join Our Whatsapp Community🚩
RELATED ARTICLES

Most Popular