HomeKarnatakaಹಲವು ವರ್ಷಗಳ ಬಳಿಕ ಅಧಿಕೃತವಾಗಿ ಸಿಎಂ ಜನತಾ ದರ್ಶನ: ಅ.9 ರಂದು ಸಾರ್ವಜನಿಕರ ಅಹವಾಲು ಸ್ವೀಕಾರ

ಹಲವು ವರ್ಷಗಳ ಬಳಿಕ ಅಧಿಕೃತವಾಗಿ ಸಿಎಂ ಜನತಾ ದರ್ಶನ: ಅ.9 ರಂದು ಸಾರ್ವಜನಿಕರ ಅಹವಾಲು ಸ್ವೀಕಾರ

ಬೆಂಗಳೂರು: ಅ. 9 ರಂದು ಸೋಮವಾರ ಬೆಳಗ್ಗೆ 10.30 ರಿಂದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನತಾದರ್ಶನ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳ ಜನತಾದರ್ಶನ ಹಲವು ವರ್ಷಗಳ ನಂತರ ಅಧಿಕೃತವಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಅಂದು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದು, ಸ್ಥಳದಲ್ಲೇ ಪರಿಹಾರ ಕಲ್ಪಿಸಿ ಕೊಡಲು ಸೂಚಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನಸಾಮಾನ್ಯರ ಸಮಸ್ಯೆ, ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ದೊರಕಿಸಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿಗಳ ನಿರ್ದೇಶನದಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಕಳೆದ ತಿಂಗಳಿಂದ ಜಿಲ್ಲಾಮಟ್ಟದಲ್ಲಿ ಜನತಾದರ್ಶನ ಆರಂಭಿಸಿದ್ದಾರೆ. ಮುಂದಿನ ಹಂತದಲ್ಲಿ ತಾಲೂಕು ಮಟ್ಟದಲ್ಲಿಯೂ ಜನತಾದರ್ಶನ ನಡೆಸಲು ಸರ್ಕಾರದಿಂದ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಜನತಾದರ್ಶನದಲ್ಲಿ ಜನಸಾಮಾನ್ಯರ ಸಮಸ್ಯೆ, ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಲ್ಪಿಸಿಕೊಡಲಾಗುವುದು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular