HomeKarnatakaBIG NEWS: ಜನತಾದರ್ಶನ: ಜನಪದ ಕಲಾವಿದನ ಹೃದ್ರೋಗ ಚಿಕಿತ್ಸೆಗೆ ಅಗತ್ಯ ನೆರವಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

BIG NEWS: ಜನತಾದರ್ಶನ: ಜನಪದ ಕಲಾವಿದನ ಹೃದ್ರೋಗ ಚಿಕಿತ್ಸೆಗೆ ಅಗತ್ಯ ನೆರವಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದರೊಬ್ಬರ ಹೃದ್ರೋಗ ಚಿಕಿತ್ಸೆಗೆ ಅಗತ್ಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಇಂದಿನ ಜನತಾದರ್ಶನ ಕಾರ್ಯಕ್ರಮದಲ್ಲಿ ಸೂಚಿಸಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಜನಪದ ಕಲಾವಿದ ಪುಟ್ಟಸ್ವಾಮಿ ಹೃದ್ರೋಗ ಚಿಕಿತ್ಸೆಗಾಗಿ ನೆರವು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುಟ್ಟಸ್ವಾಮಿ ಅವರ ಮನವಿಗೆ ಕೂಡಲೇ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ, ಅಗತ್ಯ ನೆರವು ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಗೆ ಸೂಚನೆ ನೀಡಿದರು. ಈ ಮೂಲಕ ನಾಡು ನುಡಿಗಾಗಿ ದುಡಿದ ಹಿರಿಯ ಜನಪದ ಕಲಾವಿದನಿಗೆ ನೆರವಿನ ಹಸ್ತ ಚಾಚಿದರು.

For Latest News Updates, Join Our Whatsapp Community🚩
RELATED ARTICLES

Most Popular