ಬೀದರ್ : ಜನಿವಾರ ಪ್ರಕರಣ ಸಂಬಂಧ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿ ಅವರ ಮನೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು. ಈ ವೇಳೆ ವಿದ್ಯಾರ್ಥಿಗೆ ಸಚಿವ ಈಶ್ವರ್ ಖಂಡ್ರೆ ಉಚಿತ ಇಂಜಿನಿಯರಿಂಗ್ ಸೀಟು ಕೊಡಿಸುವ ಆಫರ್ ನೀಡಿದರು.
ಬೀದರ್ ಜನಿವಾರ ಪ್ರಕರಣ ಸಂಬಂಧ, ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿ ಅವರ ಮನೆಗೆ ಇಂದು ಸಚಿವ ರಹೀಂ ಖಾನ್ ಅವರೊಂದಿಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಲಾಯಿತು. ಜನಿವಾರ ತೆಗೆಯದ ಕಾರಣದಿಂದ ಕೆಸಿಇಟಿ ಗಣಿತ ಪರೀಕ್ಷೆಗೆ ಅವಕಾಶ ದೊರೆಯದ ಸುಚಿವ್ರತ್ ಗೆ ನಮ್ಮ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಸೀಟ್ ನೀಡಲಾಗುತ್ತದೆ. ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲಾಗುವದೆಂದು ಭರವಸೆ ನೀಡಲಾಗಿದೆ. ಇಂತಹ ವಿಷಾದಕರ ಘಟನೆಗಳು ಪುನರಾವೃತವಾಗದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ತಕ್ಷಣದಂತೆ ಜಿಲ್ಲಾಧಿಕಾರಿಗೆ ತನಿಖೆ ನಡೆಸಿ 24 ಗಂಟೆಗಳಲ್ಲಿ ವರದಿ ನೀಡುವಂತೆ ಸೂಚಿಸಿದ್ದು, ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗೆ ಶೈಕ್ಷಣಿಕ ಹಕ್ಕು ತಪ್ಪದಂತೆ, ತೀವ್ರವಾಗಿ ಪರಿಶೀಲನೆ ನಡೆಯುತ್ತಿದೆ. ‘ಕಾಮಡ್ ಕೆ’ ಪರೀಕ್ಷೆ ಬರೆಯುವ ಸಾಧ್ಯತೆಗಳ ಕುರಿತು ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗಿದೆ. ಸೀಟು ಲಭ್ಯವಾದರೂ ಯಾವುದೇ ಸಂದಿಗ್ಧತೆಯಿಲ್ಲದೆ ಸರ್ಕಾರದಿಂದ ಸಂಪೂರ್ಣ ಸಹಾಯ ನೀಡಲಾಗುವುದು. ಇದು ಕೇವಲ ಒಂದು ವಿದ್ಯಾರ್ಥಿಯ ವಿಚಾರವಲ್ಲ – ನಮ್ಮ ಶಿಕ್ಷಣ ವ್ಯವಸ್ಥೆಯ ಬಗ್ಗೆ ಜನರ ನಂಬಿಕೆಯನ್ನು ಉಳಿಸಿಕೊಳ್ಳುವ ಹೊಣೆಗಾರಿಕೆಯಾಗಿದೆ. ಈ ಕಷ್ಟದ ಸಂದರ್ಭದಲ್ಲಿ ವಿದ್ಯಾರ್ಥಿ ಮತ್ತು ಅವರ ಕುಟುಂಬದೊಂದಿಗೆ ನಾವು ಬದ್ಧರಾಗಿದ್ದೇವೆ ಎಂದು ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಬೀದರ್ ಜನಿವಾರ ಪ್ರಕರಣ ಸಂಬಂಧ, ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿ ಅವರ ಮನೆಗೆ ಇಂದು ಸಚಿವ ರಹೀಂ ಖಾನ್ ಅವರೊಂದಿಗೆ ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಲಾಯಿತು.
— Eshwar Khandre (@eshwar_khandre) April 20, 2025
ಜನಿವಾರ ತೆಗೆಯದ ಕಾರಣದಿಂದ ಕೆಸಿಇಟಿ ಗಣಿತ ಪರೀಕ್ಷೆಗೆ ಅವಕಾಶ ದೊರೆಯದ ಸುಚಿವ್ರತ್ ಗೆ ನಮ್ಮ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಸೀಟ್ ನೀಡಲಾಗುತ್ತದೆ.… pic.twitter.com/eMqhIdk1Bg