ನವದೆಹಲಿ: ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಕಾರ್ಯಕರ್ತರು ದೆಹಲಿಯ ಜಂತರ್ ಮಂತರ್ ನಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಭಾಗಿಯಾಗಿದ್ದು, ಹೋರಾಟದ ಕಿಚ್ಚು ಮತ್ತಷ್ಟು ಹೆಚ್ಚಿದೆ. ಇಂದಿನಿಂದ ಸಂಸತ್ ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಮುತ್ತಿಗೆ ಹಾಕಲು ಯೋಜನೆ ರೂಪಿಸಿದ್ದರು. ಆದರೆ ಕಾಕ್ರೋಚ್ ಜನತಾ ಪಕ್ಷ ನಡೆಸಲು ಉದ್ದೇಶಿಸಿದ್ದ ‘ಚಲೋ ಸಂಸದ್’ ಮೆರವಣಿಗೆಯನ್ನು ದೆಹಲಿ ಪೊಲೀಸರು ನಿರ್ಬಂಧಿಸಿದ್ದಾರೆ. ಅನುಮತಿಯಿಲ್ಲದೆ ಬೀದಿಗಿಳಿಯುವ ಪ್ರತಿಭಟನಾಕಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ.
ಆದಾಗ್ಯೂ ನೀಟ್ ಹಗರಣ ಖಂಡಿಸಿ, ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಂಸತ್ ಭವನದತ್ತ ತೆರಲು ಸಜ್ಜಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ. ಪ್ರತಿಭಟನಾಕಾರರು ಸಂಸತ್ ಭವನಕ್ಕೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಲ್ಲದೇ, ಜೈಲಿಗೆ ಕಳುಹಿಸಿದರೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಲಾಠಿ ಚಾರ್ಜ್ ಮಾಡಿದ್ದಾರೆ. ಘಟನೆಯಲ್ಲಿ ಹಲವು ಹೋರಾಟಗಾರರು ಗಾಯಗೊಂಡಿದ್ದಾರೆ. ಜಂತರ್ ಮಂತರ್ ಪ್ರತಿಭಟನಾ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಘಟನಾ ಸ್ಥಳದಿಂದ ಪೊಲೀಸರು ವಿದ್ಯಾರ್ಥಿಗಳನ್ನು ತೆರವುಗೊಳಿಸಿದ್ದಾರೆ.
ಮತ್ತೊಂದೆಡೆ ಕಳೆದ 22ದಿನಗಲಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಇಂದು ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ಎರಡು ಷರತ್ತು ವಿಧಿಸಿದ್ದಾರೆ.
ಇತ್ತೀಚೆಗೆ ನಡೆದ ‘ನೀಟ್’ಪರೀಕ್ಷೆ ಪೇಪರ್ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಾಂಗ್ಚುಕ್ ಪಟ್ಟು ಹಿಡಿದಿದ್ದಾರೆ. ಅವರು ಉಪವಾಸ ಹಿಂಪಡೆಯಲು ಇಟ್ಟಿರುವ ಷರತ್ತುಗಳು.
ರಾಜಕೀಯ ನಾಯಕರು ಸಫ್ದರ್ಜಂಗ್ ಆಸ್ಪತ್ರೆಗೆ ಆಗಮಿಸಿ ತಮ್ಮನ್ನು ಖುದ್ದಾಗಿ ಭೇಟಿಯಾಗಬೇಕು.
ಸೋಮವಾರದಿಂದ ಆರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಶಿಕ್ಷಣ ಕ್ಷೇತ್ರದ ಉತ್ತರದಾಯಿತ್ವ ಮತ್ತು ಪರೀಕ್ಷಾ ಅಕ್ರಮಗಳ ವಿಷಯವನ್ನು ಪ್ರಸ್ತಾಪಿಸುವುದಾಗಿ ನಾಯಕರು ಭರವಸೆ ನೀಡಬೇಕು. ಈ ಭರವಸೆಗಳು ಸಿಕ್ಕರೆ ಸೋಮವಾರವೇ ತಮ್ಮ 21 ದಿನಗಳ ದೀರ್ಘ ಉಪವಾಸವನ್ನು ಕೊನೆಗೊಳಿಸುವುದಾಗಿ ವಾಂಗ್‌ಚುಕ್ ತಿಳಿಸಿದ್ದಾರೆ.

