HomeLatest Newsಸಿಜೆಪಿ ಪ್ರತಿಭಟನೆ ಮುಗಿದ ಬೆನ್ನಲೇ ಜಂತರ್-ಮಂತರ್ ನಲ್ಲಿ ಎನ್‌ಡಿಎಂಸಿ ಸಿಬ್ಬಂದಿಯಿಂದ ಸ್ವಚ್ಛತಾ ಕಾರ್ಯ: ಕಾಂಗ್ರೆಸ್ ಕಾರ್ಯಕರ್ತರು...

ಸಿಜೆಪಿ ಪ್ರತಿಭಟನೆ ಮುಗಿದ ಬೆನ್ನಲೇ ಜಂತರ್-ಮಂತರ್ ನಲ್ಲಿ ಎನ್‌ಡಿಎಂಸಿ ಸಿಬ್ಬಂದಿಯಿಂದ ಸ್ವಚ್ಛತಾ ಕಾರ್ಯ: ಕಾಂಗ್ರೆಸ್ ಕಾರ್ಯಕರ್ತರು ಭಾಗಿ

ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಹಗರಣ ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಹಾಗೂ ವಿದ್ಯಾರ್ಥಿಗಳು ದೆಹಲಿಯ ಜಂತರ್-ಮಂತರ್ ನಲ್ಲಿ 37 ದಿನಗಳ ಕಾಲ ನಿರಂತರ ಪ್ರತಿಭಟನೆ ನಡೆಸಿದ್ದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳ ಬೇಡಿಕೆಗಳನ್ನು ಈಡೇರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. ಕೇಂದ್ರದ ಭರವಸೆ ಬೆನ್ನಲ್ಲೇ ಜಂತರ್-ಮಂತರ್ ನಲ್ಲಿ ಪ್ರತಿಭಟನೆ ಅಂತ್ಯವಾಗಿದ್ದು, ಇದೀಗ ಪ್ರತಿಭಟನಾ ಸ್ಥಳದಲ್ಲಿ ಸ್ವಚ್ಛತಾ ಅಭಿಯಾನ ಆರಂಭವಾಗಿದೆ.

ಪ್ರತಿಭಟನೆ ಹಿಂತೆಗೆದುಕೊಂಡ ಬೆನ್ನಲ್ಲೇ, ನವದೆಹಲಿ ಮುನ್ಸಿಪಲ್ ಕೌನ್ಸಿಲ್ (NDMC) ಜಂತರ್-ಮಂತರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು ಸ್ವಚ್ಛಗೊಳಿಸಲು ಬೃಹತ್ ನೈರ್ಮಲ್ಯ ಅಭಿಯಾನವನ್ನು ಕೈಗೆತ್ತಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರತಿಭಟನಾ ಸ್ಥಳದಲ್ಲಿ ಹರಿದು ಬಿದ್ದಿರುವ ಪೇಪರ್ ತ್ಯಾಜ್ಯ, ಬ್ಯಾನರ್‌ಗಳು, ತಾತ್ಕಾಲಿಕ ಟೆಂಟ್‌ಗಳು ಹಾಗೂ ನಿರ್ಮಾಣ ಭಗ್ನಾವಶೇಷಗಳನ್ನು ತೆರವುಗೊಳಿಸಲು ಎನ್​ಡಿಎಂಸಿ 500ಕ್ಕೂ ಹೆಚ್ಚು ನೈರ್ಮಲ್ಯ ಕಾರ್ಮಿಕರನ್ನು ನಿಯೋಜಿಸಿದೆ. ಪ್ರದೇಶವನ್ನು ಶೀಘ್ರವೇ ಯಥಾಸ್ಥಿತಿಗೆ ತರಲು ಸಿಬ್ಬಂದಿ ದಿನದ 24 ಗಂಟೆಯೂ ಬಹು ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಎನ್ ಡಿಎಂಸಿ ಸಿಬ್ಬಂದಿಗಳ ಜೊತೆಗೆ ಕಾಂಗ್ರೆಸ್ ಕಾರ್ಯಕರ್ತರು ಕೂಡ ಕೈ ಜೋಡಿಸಿದ್ದು, ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.

ಸ್ವಚ್ಛತಾ ಕಾರ್ಯವನ್ನು ವೇಗಗೊಳಿಸಲು ಟ್ರಕ್‌ಗಳು, ಆಟೋ-ಟಿಪ್ಪರ್‌ಗಳು ಹಾಗೂ ಯಾಂತ್ರಿಕೃತ ಗಾಬ್ಲರ್ ಯಂತ್ರಗಳನ್ನು ಬಳಸಲಾಗುತ್ತಿದೆ. ಕೇವಲ ಜಂತರ್ ಮಂತರ್ ಅಷ್ಟೇ ಅಲ್ಲದೆ, ಪ್ರತಿಭಟನೆಯಿಂದಾಗಿ ಭಾರೀ ಜನದಟ್ಟಣೆ ಕಂಡಿದ್ದ ಟಾಲ್‌ಸ್ಟಾಯ್ ಮಾರ್ಗ, ಜೈ ಸಿಂಗ್ ರಸ್ತೆ, ಸಂಸದ್ ಮಾರ್ಗ ಮತ್ತು ಕನ್ನಾಟ್ ಪ್ಲೇಸ್‌ನ ಪ್ರಮುಖ ಭಾಗಗಳಲ್ಲೂ ನೈರ್ಮಲ್ಯ ಅಭಿಯಾನ ಬಿರುಸಿನಿಂದ ಸಾಗಿದೆ.

ಹತ್ತಾರು ಟನ್ ಮಿಶ್ರ ತ್ಯಾಜ್ಯವನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, ಇಡೀ ಪ್ರದೇಶವು ಸಂಪೂರ್ಣವಾಗಿ ಸ್ವಚ್ಛಗೊಳ್ಳುವವರೆಗೆ ಈ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಎನ್‌ಡಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ನಿವಾಸಿಗಳಿಗೆ ಮತ್ತು ವಾಹನ ಸಂಚಾರಕ್ಕೆ ಉಂಟಾಗಿದ್ದ ಅಡಚಣೆಯನ್ನು ನಿವಾರಿಸಲು ಹೆದ್ದಾರಿ ಸಾರಿಗೆ ಮತ್ತು ಸಂಚಾರ ಪೊಲೀಸರು ಸ್ಥಳದಲ್ಲಿದ್ದು ಸಹಕರಿಸುತ್ತಿದ್ದಾರೆ. ಇಡೀ ಪ್ರದೇಶವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಸಾರ್ವಜನಿಕರ ಬಳಕೆಗೆ ಯಥಾಸ್ಥಿತಿಯಲ್ಲಿ ಮುಕ್ತಗೊಳಿಸುವವರೆಗೆ ಈ ಅಭಿಯಾನ ಮುಂದುವರೆಯಲಿದೆ ಎಂದು ಎನ್‌ಡಿಎಂಸಿ ಸ್ಪಷ್ಟಪಡಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular