HomeLatest Newsನಮ್ಮ ಮೆಟ್ರೋ ಮೂರನೇ ಹಂತಕ್ಕೆ ಜಪಾನ್ 6775 ಕೋಟಿ ರೂ. ಸಾಲ

ನಮ್ಮ ಮೆಟ್ರೋ ಮೂರನೇ ಹಂತಕ್ಕೆ ಜಪಾನ್ 6775 ಕೋಟಿ ರೂ. ಸಾಲ

ಬೆಂಗಳೂರು: ನಮ್ಮ ಮೆಟ್ರೋ ಯೋಜನೆಯ ಮೂರನೇ ಹಂತದ ಮಾರ್ಗದ ಕಾಮಗಾರಿಗೆ ಅಗತ್ಯವಿರುವ ಆರ್ಥಿಕ ನೆರವು ನೀಡಲು ಜಪಾನ್ ಅಂತರಾಷ್ಟ್ರೀಯ ಸಹಕಾರ ಸಂಸ್ಥೆ ಜೈಕಾ ಜೊತೆಗೆ ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವಾಲಯ ಅಧಿಕಾರಿಗಳು ಮಂಗಳವಾರ ಒಡಂಬಡಿಕೆ ಮಾಡಿಕೊಂಡಿದ್ದಾರೆ.

ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗಾಗಿ 6775 ಕೋಟಿ ರೂ. ಸಾಲ ಪಡೆಯಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಈ ಮೊತ್ತವನ್ನು ಜೈಕಾ ಮೂಲಕ ಪಡೆಯಲು ನಿರ್ಧರಿಸಲಾಗಿದೆ. ಎರಡು ಹಂತದಲ್ಲಿ ಜೈಕಾ ಆರ್ಥಿಕ ನೆರವು ನೀಡಲಿದೆ. ಮೊದಲ ಹಂತದಲ್ಲಿ 6100 ಕೋಟಿ ರೂ. ಮತ್ತು ಉಳಿದ ಹಣವನ್ನು ದ್ವಿತೀಯ ಹಂತದಲ್ಲಿ ನೀಡಲಾಗುವುದು.

ಭಾರತದ ಜೈಕಾ ಕಚೇರಿಯ ಮುಖ್ಯ ಪ್ರತಿನಿಧಿ ಟಕೆಉಚಿ ತಕುರು ಅವರು ಕೇಂದ್ರ ಆರ್ಥಿಕ ವ್ಯವಹಾರಗಳ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಲೋಕ್ ತಿವಾರಿಯೊಂದಿಗೆ ಮಂಗಳವಾರ ನವದೆಹಲಿಯಲ್ಲಿ ಆರ್ಥಿಕ ನೆರವಿನ ಒಡಂಬಡಿಕೆಗೆ ಸಹಿ ಹಾಕಿದ್ದಾರೆ. ಈ ವೇಳೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಜೆ. ರವಿಶಂಕರ್ ಇದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಮೆಟ್ರೋ ಮೂರನೇ ಹಂತದಲ್ಲಿ ಜೆಸಿ ನಗರ ನಾಲ್ಕನೇ ಹಂತದಿಂದ ಕೆಂಪಾಪುರವರೆಗೆ ಮತ್ತು ಹೊಸಹಳ್ಳಿಯಿಂದ ಕಡಬಗೆರೆವರೆಗೆ ಒಟ್ಟು 44.65 ಕಿಲೋಮೀಟರ್ ಉದ್ದದ ಮೆಟ್ರೋ ಮಾರ್ಗ ನಿರ್ಮಿಸಲಾಗುವುದು. ಯೋಜನೆಗೆ ಒಟ್ಟು 15,611 ಕೋಟಿ ರೂ. ವ್ಯಯಿಸಲಾಗುವುದು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular