HomeLatest Newsಬೆಂಗಳೂರಿನ ಜಪಾನ್, ಡಚ್ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ: ತಮಿಳುನಾಡು ಸಿಎಂ ಪುತ್ರನ ಹೆಸರು ಉಲ್ಲೇಖ

ಬೆಂಗಳೂರಿನ ಜಪಾನ್, ಡಚ್ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ: ತಮಿಳುನಾಡು ಸಿಎಂ ಪುತ್ರನ ಹೆಸರು ಉಲ್ಲೇಖ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಜಪಾನ್ ಹಾಗೂ ಡಚ್ ರಾಯಭಾರ ಕಚೇರಿಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕಳೆದ ಹತ್ತು ದಿನಗಳಲ್ಲಿ ಬಂದಿರುವ ಎರಡನೇ ಬಾಂಬ್ ಬೆದರಿಕೆ ಕರೆ ಇದಾಗಿದೆ.

ಬೆಂಗಳೂರು ನಗರದಲ್ಲಿರುವ ಜಪಾನ್ ಹಾಗೂ ಡಚ್ ರಾಯಭಾರ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಬಾಂಬ್ ಬೆದರಿಕೆ ಇ-ಮೇಲ್ ನಲ್ಲಿ ಅಪರಿಚಿತರು ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಪುತ್ರ, ಡಿಸಿಎಂ ಉದಯನಿಧಿ ಸ್ಟಾಲಿನ್ ಹೆಸರನ್ನು ಉಲ್ಲೇಖಿಸಿದ್ದಾರೆ.

ಕೋರಮಂಡಲ್ ಹೋಟೆಲ್ ನ ಕೊಠಡಿ ಸಂಖ್ಯೆ 536ರಲ್ಲಿ ಸ್ಟಾಲಿನ್ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ. ವಿಐಪಿ ಪರಿಚಯ ಮಾಡಿಸುತ್ತೇನೆ ಎಂದು ಹೋಟೆಲ್ ಗೆ ಕರೆಸಿ ಕೃತ್ಯವೆಸಗಲಾಗಿದ್ದು, ಅರ್ಜುನ್ ದೊರೆ ರಾಜಶೇಖರ್ ಎಂಬಾತ ಮಹಿಳೆಯನ್ನು ಕರೆದೊಯ್ದಿದ್ದ. ಹೋಟೆಲ್ ಗೆ ಹೋದಾಗ ಸ್ಟಾಲಿನ್ ಅರೆಬೆತ್ತಲಾಗಿ ಕುಳಿತಿದ್ದರು. ಈ ಬಗ್ಗೆ ದೂರು ನೀಡಿದರೂ ತಮಿಳುನಾಡು ಪೊಲೀಸರು ಕೇಸ್ ದಾಖಲಿಸಿಕೊಂಡಿಲ್ಲ. ಪ್ರಕರಣ ದಾಖಲಿಸದ ಹಿನ್ನೆಲೆಯಲ್ಲಿ ಜಪಾನ್ ರಾಯಭಾರ ಕಚೇರಿಯ ಶೌಚಾಲಯದಲ್ಲಿ 4 RDX, IED ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಸಂದೇಶದಲ್ಲಿ ಬರೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಷಯ ತಿಳಿಯುತ್ತಿದ್ದಂತೆ ಬಾಂಬ್ ಪತ್ತೆ ದಳ, ಬಾಅಂಬ್ ನಿಷ್ಕ್ರಿಯ ದಳ, ಶ್ವಾನ ದಳದೊಂದಿಗೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕಚೇರಿಗಳಲ್ಲಿ ಯಾವುದೇ ಸ್ಫೋಟಕಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular