HomeIndiaBREAKING NEWS: ಜಾರ್ಖಂಡ್ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತಗಳಲ್ಲಿ ಮತದಾನ

BREAKING NEWS: ಜಾರ್ಖಂಡ್ ಚುನಾವಣೆಗೆ ಮುಹೂರ್ತ ಫಿಕ್ಸ್: 2 ಹಂತಗಳಲ್ಲಿ ಮತದಾನ

ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಾರ್ಖಂಡ್ ನಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ.

ದೆಹಲಿ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್, ಜಾರ್ಖಂಡ್ ನ 81 ಕ್ಷೇತ್ರಗಳಿಗೆ 2 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ತಿಳಿಸಿದರು.

ಮೊದಲ ಹಂತದಲ್ಲಿ ನವೆಂಬರ್ 13ರಂದು ಮತದಾನ ನಡೆಯಲಿದೆ. ಎರಡನೇ ಹಂತದಲ್ಲಿ ನವೆಂಬರ್ 21ರಂದು ಮತದಾನ ನಡೆಯಲಿದೆ. ನವೆಂಬರ್ 23ರಂದು ಫಲಿತಾಂಶ ಪ್ರಕಟವಾಗಲಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 20ರಂದು ಮತದಾನ ನಡೆಯಲಿದ್ದು, ನವೆಂಬರ್ 23ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular