ರಾಂಚಿ: ಜಾರ್ಖಂಡ್ ನಲ್ಲಿ ಧಾರಾಕಾರ ಮಳೆಯಿಂದಾಗಿ ಸಾಲು ಸಾಲು ಅನಾಹುತಗಳು ಸಂಭವಿಸಿವೆ. ಮಳೆ ಅನಾಹುತದಲ್ಲಿ ಈವರೆಗೆ ಐವರು ಮೃತಪಟ್ಟಿದ್ದು ಹಲವರ ಸ್ಥಿತಿ ಗಂಭೀರವಾಗಿದೆ.
ಸೆರೈಕಲಾ-ಖಾರ್ಸಾವಾನ್ ಜಿಲ್ಲೆಯಲ್ಲಿ ಮನೆ ಗೋಡೆ ಕುಸಿದು ಮಹಿಳೆ ಮತ್ತು ಏಳು ವರ್ಷದ ಮಗ ಸಾವನ್ನಪ್ಪಿದ್ದಾರೆ. ದಂಡು ಗ್ರಾಮದಲ್ಲಿ ಮಳೆ ನಾಹುತದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ.
ಖಾರ್ಸಾವಾನ್ ಶಿಮ್ಲಾದಲ್ಲಿ ಮನೆ ಗೋಡೆ ಕುಸಿದು ಐದು ವರ್ಷದ ಬಾಲಕ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮತ್ತೊಂದೆದೆ ಉಕ್ಕಿ ಹರಿಯುತ್ತಿರುವ ಸಿಯಾರಿ ನದಿಯಲ್ಲಿ ದಂಪತಿ ಕೊಚ್ಚಿಹೋಗಿದ್ದಾರೆ. ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಹಲವೆಡೆ ವಿದ್ಯುತ್ ಕಂಬಗಳು ಧರಾಶಾಹಿಯಾಗಿವೆ. ರಸ್ತೆಗಳು ಜಲಾವೃತಗೊಂಡಿವೆ.
ಆಗಸ್ಟ್ 25ರವರೆಗೆ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.