ವಿಜಯನಗರ ಜಿಲ್ಲೆಯ ಚಿಕ್ಕಜೋಗಿಹಳ್ಳಿಯ ಪಿ.ಎಂ.ಶ್ರೀ ಜವಾಹರ್ ನವೋದಯ ವಿದ್ಯಾಲಯ ಪ್ರಥಮ ಪಿಯುಸಿಯ ವಿಜ್ಞಾನ ವಿಭಾಗಲ್ಲಿ ಖಾಲಿ ಇರುವ ಸೀಟುಗಳಿಗೆ ಭರ್ತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದೆ.
ಸೆ.23 ರೊಳಗಾಗಿ 10 ನೇ ತರಗತಿಯಲ್ಲಿ ಗಣಿತ ಮತ್ತು ವಿಜ್ಞಾನದಲ್ಲಿ ಶೇ.60ರಷ್ಟು ಅಂಕಗಳೊAದಿಗೆ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯಬಹುದು. ಕೆಲವೇ ಸೀಟುಗಳು ಮಾತ್ರ ಲಭ್ಯವಿದ್ದು ಮೊದಲು ಬಂದವರಿಗೆ ಆದ್ಯತೆ ನೀಡಲಾಗುವುದು.
*ನೇರ ಪ್ರವೇಶಾತಿ ನಡೆಯುವ ಸ್ಥಳ:*
ಸೆ.20 ರಂದು ಬಳ್ಳಾರಿ ಈಸ್ಟ್ ಮತ್ತು ಬಳ್ಳಾರಿ ವೆಸ್ಟ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ. ಸೆ.22 ರಂದು ಸಿರುಗುಪ್ಪ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನಡೆಯಲಿದೆ.
ವಿದ್ಯಾರ್ಥಿಗಳು ಪ್ರವೇಶಾತಿ ಸಮಯದಲ್ಲಿ ಅಗತ್ಯವಿರುವ ಎಲ್ಲಾ ದಾಖಲಾತಿಗಳನ್ನು ತರಬೇಕು ಮತ್ತು ನೇರ ಪ್ರವೇಶವನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಜವಾಹರ ನವೋದಯದ ವಿದ್ಯಾಲಯ, ಇಲ್ಲಿಗೆ ಭೇಟಿ ನೀಡಬಹುದು ಎಂದು ಪ್ರಾಚಾರ್ಯ ಎಂದು ಸುದೇಶ ಗೋಪಾಲ ಮಲಾಜುರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.