HomeKarnatakaBREAKING: ಗುಂಡು ಹಾರಿಸಿಕೊಂಡು ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಆತ್ಮಹತ್ಯೆ

BREAKING: ಗುಂಡು ಹಾರಿಸಿಕೊಂಡು ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಆತ್ಮಹತ್ಯೆ

ಕಾರವಾರ: ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಕೈಗಾ ಅಣುಸ್ಥಾವರದ ಬಳಿ ಘಟನೆ ನಡೆದಿದೆ.

ಬಿಹಾರ ಮೂಲದ ಸಿಐಎಸ್ಎಫ್ ಯೋಧ ಅರವಿಂದ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕೈಗಾದ ಕ್ವಿಕ್ ರೆಸ್ಪಾನ್ಸ್ ಟೀಮ್ ನಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ಬರುವಾಗ ಗನ್ ನಿಂದ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಕ್ಷಣಾ ಸಿಬ್ಬಂದಿ ಆತ್ಮಹತ್ಯೆಯಿಂದಾಗಿ ಕೈಗಾದಲ್ಲಿ ಆತಂಕ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular