ನರ್ಸ್ ಹುದ್ದೆ ಆಕಾಂಕ್ಷಿಗಳಿಗೆ ಶುಭ ಸುದ್ದಿ: ನೇರ ನೇಮಕಾತಿಗೆ KEA ಅಧಿಸೂಚನೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಸ್ಥಳೀಯ ವೃಂದದ 100 ಶುಶ್ರೂಷಕಾಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ(KEA) ಅಧಿಸೂಚನೆ ಹೊರಡಿಸಲಾಗಿದೆ.

ಉಳಿಕೆ ಮೂಲ ವೃಂದದ 92, ಕಲ್ಯಾಣ ಕರ್ನಾಟಕದ ಎಂಟು ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು.

ನರ್ಸಿಂಗ್ ಮುಗಿಸಿದ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು.

ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ ಪಂಗಡ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ನವೆಂಬರ್ 2ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನವೆಂಬರ್ 4ರ ವರೆಗೆ ಇ- ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ.

ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 750 ರೂಪಾಯಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 500 ರೂಪಾಯಿ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗಿದೆ.

ಬೆಂಗಳೂರು ಕೇಂದ್ರದಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುವುದು.

ಸಾಮಾನ್ಯ ಇಂಗ್ಲಿಷ್, ಸಾಮಾನ್ಯ ಜ್ಞಾನ, ತಾರ್ಕಿಕ ಮತ್ತು ಮಾನಸಿಕ ಸಾಮರ್ಥ್ಯ, ಕಂಪ್ಯೂಟರ್ ಜ್ಞಾನಕ್ಕೆ 20 ಅಂಕ, ಬಿಎಸ್ಸಿ ನರ್ಸಿಂಗ್ 80 ಅಂಕ ಸೇರಿ 100 ಅಂಕಗಳಿಗೆ ಪರೀಕ್ಷೆ ನಡೆಸಲಿದ್ದು, ತಪ್ಪು ಉತ್ತರಗಳಿಗೆ ಪ್ರತಿ ¼ ಅಂಕಗಳನ್ನು ಕಳೆಯಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read