HomeKarnatakaಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ: ಜಾತಿ ಗಣತಿ ವರದಿ ಮತ್ತಷ್ಟು ವಿಳಂಬ...

ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ಮತ್ತೆ ವಿಸ್ತರಣೆ: ಜಾತಿ ಗಣತಿ ವರದಿ ಮತ್ತಷ್ಟು ವಿಳಂಬ ಸಾಧ್ಯತೆ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರ ಅವಧಿಯನ್ನು ರಾಜ್ಯ ಸರ್ಕಾರ ಎರಡನೇ ಬಾರಿಗೆ ವಿಸ್ತರಿಸಿದ್ದು, ಇದರಿಂದಾಗಿ ಬಹು ನಿರೀಕ್ಷಿತ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ವರದಿ ಸದ್ಯಕ್ಕೆ ರಾಜ್ಯ ಸರ್ಕಾರಕ್ಕೆ ಸಲ್ಲಿಕೆಯಾಗುವುದು ವಿಳಂಬವಾಗುವ ಸಾಧ್ಯತೆ ಇದೆ.

ಸಿಎಂ ಸಿದ್ಧರಾಮಯ್ಯ ಅವರು ಫೆ. 15ರವರೆಗೂ ಜಯಪ್ರಕಾಶ್ ಹೆಗಡೆ ಅವರ ಅವಧಿ ವಿಸ್ತರಿಸಿದ್ದು, ಇದರಿಂದಾಗಿ ಜಾತಿ ಗಣತಿ ವರದಿ ಸಲ್ಲಿಕೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಕಳೆದ ನವಂಬರ್ ನಲ್ಲೇ ಜಯಪ್ರಕಾಶ್ ಹೆಗಡೆ ಅವರ ಅಧಿಕಾರದ ಅವಧಿ ಪೂರ್ಣಗೊಂಡಿತ್ತು. ಜನವರಿ 31ರವರೆಗೂ ಸರ್ಕಾರ ವಿಸ್ತರಿಸಿತ್ತು. ಈಗ ಆಯೋಗದಿಂದ ವರದಿ ಸ್ವೀಕರಿಸುವ ಹಿನ್ನೆಲೆಯಲ್ಲಿ ಫೆಬ್ರವರಿ 15ರವರೆಗೂ ವಿಸ್ತರಿಸಲಾಗಿದೆ. ಚಿತ್ರದುರ್ಗದಲ್ಲಿ ನಡೆದ ಶೋಷಿತ ವರ್ಗದ ಜಾಗೃತಿ ಸಮಾವೇಶದಲ್ಲಿ ಕಾಂತರಾಜು ವರದಿ ಸ್ವೀಕರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular