ರೈತಪರ ಹೋರಾಟಗಾರ್ತಿ ಜಯಶ್ರೀ ಗುರನ್ನವರ ವಿಧಿವಶ

ಬೆಳಗಾವಿ: ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ್ (40) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಜಯಶ್ರೀ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಉತ್ತರ ಕರ್ನಾಟಕ ಭಾಗದ ರೈತರು, ಕಾರ್ಮಿಕರ ಪರ ಹೋರಾಟ ನಡೆಸುತ್ತಿದ್ದ ಜಯಶ್ರೀ ಗುರನ್ನವರ್ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ದೊಡ್ಡಮಟ್ಟದ ಹೋರಾಟದ ಮೂಲಕ ಗಮನ ಸೆಳೆದಿದ್ದರು. ಕಬ್ಬಿನ ಬಾಕಿ ಬಿಲ್ ಗಾಗಿ ಸುವರ್ಣ ವಿಧಾನಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗುವ ಮೂಲಕ ಸರ್ಕಾರದ ಗಮನ ಸೆಳೆದಿದ್ದರು.

ಜಯಶ್ರೀ ಬೆಳಗಾವಿ ಮಾತ್ರವಲ್ಲ, ರಾಜ್ಯಾದ್ಯಂತ ರೈತರ ಪರ ಹೋರಾಟ ನಡೆಸಿದ್ದರು. ನರೇಗಾ ಕೂಲಿ ಕಾರ್ಮಿಕರ ಪರವಾಗಿಯೂ ಹೋರಾಟ ನಡೆಸಿದ್ದರು.

ಜಯಶ್ರೀ ಗುರನ್ನವರ್ ನಿಧನಕ್ಕೆ ರೈತ ಮುಖಂಡರು, ರಾಜಕೀಯ ನಯಕರು ಕಂಬನಿ ಮಿಡಿದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read