ಈ ಸರ್ಕಾರ ಹೆಚ್ಚು ದಿನ ಇರಲ್ಲ, ನಾನು ಕಾಂಗ್ರೆಸ್ ಸೇರಲ್ಲ: ಮಾಧುಸ್ವಾಮಿ

ಚಿಕ್ಕನಾಯಕನಹಳ್ಳಿ: ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂಬುದೆಲ್ಲ ಸುಳ್ಳು. ಇಂತಹ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದು ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಸಮಾಲೋಚನಾ ಸಭೆ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತನಾಗಿದ್ದು, ಪಕ್ಷ ನನಗೆ ಎಲ್ಲಾ ರೀತಿಯ ಗೌರವ ನೀಡಿದೆ. ಮಂತ್ರಿ ಪದವಿ ನೀಡಿದೆ. ಅತ್ಯಂತ ಗೌರವದಿಂದ ನನ್ನನ್ನು ನಡೆಸಿಕೊಂಡಿದೆ. ಅಂತಹ ಪಕ್ಷವನ್ನು ಬಿಟ್ಟು ನಾನು ದ್ರೋಹ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭವಿಷ್ಯವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಯುತ್ತಿದೆ. ಈ ಸರ್ಕಾರ ಹೆಚ್ಚು ದಿನ ಅಸ್ತಿತ್ವದಲ್ಲಿ ಇರುವುದಿಲ್ಲ. ಅಧಿಕಾರ ಹಂಚಿಕೆಯ ಒಳಜಗಳ ನಡೆಯುತ್ತಿದ್ದು, ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read