ಬೆಂಗಳೂರು: ನಗರದಲ್ಲಿ ಪಾದಚಾರಿಗಳ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್ ಅತಿಕ್ರಮಣ ತೆರವುಗೊಳಿಸಲು ಬೃಹತ್ ಕಾರ್ಯಾಚರಣೆ ಆರಂಭಿಸಲಾಗಿದೆ. ಬುಧವಾರ ಜೆಸಿಬಿ ಯಂತ್ರಗಳೊಂದಿಗೆ ಅಧಿಕಾರಿಗಳು ಅಶೋಕ ಪಿಲ್ಲರ್ ಹಾಗೂ ಜಯನಗರ ಭಾಗಗಳಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಿದರು.
ಬೆಂಗಳೂರು ಕೇಂದ್ರ ತೆರಿಗೆ ವ್ಯಾಪ್ತಿಯಡಿ ನಾಲ್ಕು ವಲಯಗಳಲ್ಲಿ ಸುಮಾರು 10 ಕಿಲೋಮೀಟರ್ ವ್ಯಾಪ್ತಿಯ ಅತಿಕ್ರಮಣವನ್ನು ತೆರವುಗೊಳಿಸುವ ಅಭಿಯಾನ ಕೈಗೊಳ್ಳಲಾಗಿದೆ. ಕಾರ್ಯಾಚರಣೆಯ ವೇಳೆ ಹೋಟೆಲ್‌ಗಳ ಮುಂಭಾಗದಲ್ಲಿ ಅನಧಿಕೃತವಾಗಿ ಇಟ್ಟಿದ್ದ ಟೀ ಅಂಗಡಿಗಳನ್ನು ತೆರವುಗೊಳಿಸಲಾಯಿತು.
ಇದೇ ವೇಳೆ ಕಟ್ಟಡ ನಿರ್ಮಾಣ ಕಾಮಗಾರಿಗಳಿಗಾಗಿ ಫುಟ್‌ಪಾತ್ ಮತ್ತು ಸಾರ್ವಜನಿಕ ಜಾಗವನ್ನು ಅತಿಕ್ರಮಿಸಿಕೊಂಡಿದ್ದವರ ವಿರುದ್ಧವೂ ಅಧಿಕಾರಿಗಳು ಕ್ರಮ ಕೈಗೊಂಡರು. ಪಾದಚಾರಿಗಳಿಗೆ ತೊಂದರೆ ಉಂಟುಮಾಡುತ್ತಿದ್ದ ಅನಧಿಕೃತ ನಿರ್ಮಾಣಗಳು ಹಾಗೂ ತಾತ್ಕಾಲಿಕ ಅತಿಕ್ರಮಣಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.
ನಗರದ ವಿವಿಧ ಭಾಗಗಳಲ್ಲೂ ಇದೇ ರೀತಿಯ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರಿಯಲಿದ್ದು, ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

