BREAKING: ಭಾರತ –ಪಾಕಿಸ್ತಾನ ಸಂಘರ್ಷದಲ್ಲಿ ಹಸ್ತಕ್ಷೇಪ ಮಾಡಲ್ಲ: ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್

ವಾಷಿಂಗ್ಟನ್: ಭಾರತ-ಪಾಕಿಸ್ತಾನ ವಿಷಯದಲ್ಲಿ ಅಮೆರಿಕ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸಂಘರ್ಷದಲ್ಲಿ ಅಮೆರಿಕದ ನೇರ ಪಾತ್ರವಿಲ್ಲ ಎಂದು ಅವರು ಹೇಳಿದ್ದಾರೆ. ಈ ಸನ್ನಿವೇಶಗಳನ್ನು ನಿಯಂತ್ರಿಸುವ ಸ್ಥಿತಿಯಲ್ಲಿ ಅಮೆರಿಕ ಇಲ್ಲ. ಈ ಸಂಘರ್ಷದ ಮೂಲ ಅಮೆರಿಕಕ್ಕೆ ಸಂಬಂಧಿಸಿದ್ದಲ್ಲ. ಶಸ್ತ್ರಾಸ್ತ್ರಗಳನ್ನು ತ್ಯಜಿಸಿ ಎಂದು ಅಮೆರಿಕ ಹೇಳಲು ಸಾಧ್ಯವಿಲ್ಲ. ಅಮೆರಿಕ ರಾಜತಾಂತ್ರಿಕವಾಗಿ ಮುಂದುವರೆಯಲಿದೆ. ಆದರೆ ಇದು ಪರಮಾಣು ಯುದ್ಧ ಆಗಬಾರದು, ಪರಮಾಣು ಯುದ್ಧ ಆದರೆ ವಿನಾಶಕಾರಿಯಾಗುತ್ತದೆ. ಪರಮಾಣು ಯುದ್ಧ ನಡೆಯುತ್ತದೆ ಎಂದು ಭಾವಿಸುವುದಿಲ್ಲ ಎಂದು ಹೇಳಿದ್ದಾರೆ.

ಭಾರತ-ಪಾಕಿಸ್ತಾನ ಸಂಘರ್ಷವು “ಮೂಲಭೂತವಾಗಿ ನಮಗೆ ಸಂಬಂಧವಿಲ್ಲ”. ಆದರೆ ಅದು ಪರಮಾಣು ಯುದ್ಧವಾಗಿ ಉಲ್ಬಣಗೊಳ್ಳಬಾರದು ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಆಶಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read