
ಇದರ ಮಧ್ಯೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ ರಚಿಸಲು ನಮಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿಸುವುದಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ.
ರಾಜ್ಯದ ಜನತೆ ಜೆಡಿಎಸ್ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡುವ ವಿಶ್ವಾಸವನ್ನು ತಾವು ಹೊಂದಿದ್ದು, ಒಂದು ವೇಳೆ ಸರ್ಕಾರ ರಚಿಸಲು ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿಸಲು ತೀರ್ಮಾನ ಕೈಗೊಂಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ವಿರುದ್ಧವೂ ಎಚ್.ಡಿ.ಕೆ. ವಾಗ್ದಾಳಿ ನಡೆಸಿದ್ದಾರೆ.

