HomeKarnatakaJDS ಶಾಸಕ ಶಿವಲಿಂಗೇಗೌಡ 100% ಕಾಂಗ್ರೆಸ್ ಗೆ ಬರ್ತಾರೆ ಎಂದ ಸಿದ್ದರಾಮಯ್ಯ

JDS ಶಾಸಕ ಶಿವಲಿಂಗೇಗೌಡ 100% ಕಾಂಗ್ರೆಸ್ ಗೆ ಬರ್ತಾರೆ ಎಂದ ಸಿದ್ದರಾಮಯ್ಯ

ರಾಯಚೂರು: ಜೆಡಿಎಸ್ ವಿರುದ್ಧ ಸಿಡಿದೆದ್ದಿರುವ ಅರಸಿಕೆರೆ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾದಂತಿದೆ. ಶಿವಲಿಂಗೇಗೌಡರು ಕಾಂಗ್ರೆಸ್ ಗೆ ಸೇರುತ್ತಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಯಚೂರಿನ ಸಿಂಧನೂರಿನಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಿವಲಿಂಗೇಗೌಡರು 100% ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ. ಅವರು ಕಾಂಗ್ರೆಸ್ ಸೇರುವ ಬಗ್ಗೆ ಅನುಮಾನವಿದೆಯೇ ? ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿವೇಶನ ಮುಗಿಯುತ್ತಿದ್ದಂತೆ ಅವರು ಯಾವಾಗ ಬೇಕಾದರೂ ಕಾಂಗ್ರೆಸ್ ಗೆ ಸೇರ್ಪಡೆಯಾಗಬಹುದು ಎಂದು ಹೇಳಿದರು.

ಇಂದು ಅರಸಿಕೆರೆಯಲ್ಲಿ ಜೆಡಿಎಸ್ ಬೃಹತ್ ಸಮಾವೇಶ ನಡೆಯುತ್ತಿದ್ದು, ಶಾಸಕನಾಗಿರುವ ನನಗೆ ಮಾಹಿತಿ ನೀಡದೇ ಸಮಾವೇಶ ಆಯೋಜಿಸಿದ್ದಾರೆ, ನಾಮಕಾವಸ್ತೆಗೆ ಬ್ಯಾನರ್ ನಲ್ಲಿ ನನ್ನ ಹೆಸರು ಹಾಕಿದ್ದಾರೆ ಎಂದು ಶಿವಲಿಂಗೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದರ ಬೆನ್ನಲ್ಲೇ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಲಿದ್ದಾರೆ ಎಂಬುದನ್ನು ಸಿದ್ದರಾಮಯ್ಯ ಖಚಿತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular