‘KD’ ಅಂದ್ರೆ ಅಪಾರ್ಥ ಬೇಡ, ‘ಕಮಲ ದಳ’: ಬಿಜೆಪಿ –ಜೆಡಿಎಸ್ ಮೈತ್ರಿಗೆ ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು: ಜೆಡಿಎಸ್ ಇಂದು ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ, ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು. ಕೇವಲ JD ಎಂದು ಇಟ್ಟುಕೊಳ್ಳಬಹುದು. ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ! KD ಅಂದರೆ “ಕಮಲ ದಳ ಎಂದು ಕಾಂಗ್ರೆಸ್ ಟೀಕಿಸಿದೆ.

ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ, ಅಭಿನಂದನೆಗಳು. ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ. ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹಿರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

https://twitter.com/INCKarnataka/status/1705215600820101266

https://twitter.com/INCKarnataka/status/1705222798040510711

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read