ಬೆಂಗಳೂರು: ಜೆಡಿಎಸ್ ಇಂದು ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ, ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು. ಕೇವಲ JD ಎಂದು ಇಟ್ಟುಕೊಳ್ಳಬಹುದು. ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ! KD ಅಂದರೆ “ಕಮಲ ದಳ ಎಂದು ಕಾಂಗ್ರೆಸ್ ಟೀಕಿಸಿದೆ.
ಪಕ್ಷ ವಿಸರ್ಜಿಸುತ್ತೇನೆ ಎಂದವರು ಜಾತ್ಯತೀತತೆಯನ್ನು ವಿಸರ್ಜಿಸಿದ್ದಾರೆ, ಅಭಿನಂದನೆಗಳು. ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ. ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹಿರಂಗವಾಗಿ ಜೊತೆಗೂಡಿದೆ. ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.
ಜೆಡಿಎಸ್ ಇಂದು ಅಧಿಕೃತವಾಗಿ NDA ಮೈತ್ರಿಕೂಟದೊಳಗೆ ವಿಲೀನವಾಗಿದೆ,
ಇನ್ಮುಂದೆ JDS ಪಕ್ಷವು ತನ್ನ ಹೆಸರಿನ ಮುಂದಿರುವ “ಸೆಕ್ಯೂಲರ್ ಪದವನ್ನು ಕೈಬಿಡುವುದು ಒಳ್ಳೆಯದು.
ಕೇವಲ JD ಎಂದು ಇಟ್ಟುಕೊಳ್ಳಬಹುದು ಇಲ್ಲವೇ KD ಎಂದು ಬದಲಿಸಿಕೊಳ್ಳಬಹುದು, ಕೆಡಿ ಅಂದರೆ ಅಪಾರ್ಥ ಬೇಡ!
KD ಅಂದರೆ “ಕಮಲ ದಳ”!ಪಕ್ಷ ವಿಸರ್ಜಿಸುತ್ತೇನೆ ಎಂದವರು…
— Karnataka Congress (@INCKarnataka) September 22, 2023
ಬಿಜೆಪಿಯ ಬಿ ಟೀಮ್ ಜೆಡಿಎಸ್ ಎಂಬುದಕ್ಕೆ ಇಂದು ಅಧಿಕೃತ ಮುದ್ರೆ ಬಿದ್ದಿದೆ,
ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಕದ್ದುಮುಚ್ಚಿ ಅಫೇರ್ ಇಟ್ಟುಕೊಂಡಿದ್ದ ಜೆಡಿಎಸ್ ಇಂದು ಬಹುರಂಗವಾಗಿ ಜೊತೆಗೂಡಿದೆ.
ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಕುಮಾರಸ್ವಾಮಿಯವರು ಇಂದು ದರಿದ್ರ ಬಂದಿದೆ ಎಂದು ಒಪ್ಪಿಕೊಂಡಂತಾಗಿದೆ.
— Karnataka Congress (@INCKarnataka) September 22, 2023


