HomeKarnatakaಮತದಾನ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಶಾಕ್

ಮತದಾನ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಶಾಕ್

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್ ಅಭ್ಯರ್ಥಿ ತಟಸ್ಥರಾಗಿದ್ದಾರೆ. ಇದರಿಂದಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಶಾಕ್ ಉಂಟಾಗಿದೆ.

ಕ್ಷೇತ್ರದ ಅಭ್ಯರ್ಥಿಯಾಗಿರುವ ರಾಜಣ್ಣ ಪ್ರಚಾರದಲ್ಲಿ ತೊಡಗಿಸಿಕೊಳ್ಳದೇ ತಟಸ್ಥರಾಗಿ ಉಳಿದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಈ ಮೊದಲು ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ ಜೆಡಿಎಸ್ ಅಭ್ಯರ್ಥಿಯಾಗಿ ಡಾ. ಪ್ರಸನ್ನ ಅವರನ್ನು ಕಣಕ್ಕಿಳಿಸಲಾಗಿತ್ತು. ಅವರು ಉತ್ಸಾಹ ತೋರದ ಹಿನ್ನೆಲೆಯಲ್ಲಿ ಅಭ್ಯರ್ಥಿ ಬದಲಾವಣೆ ಮಾಡಿ ರಾಜಣ್ಣ ಅವರಿಗೆ ಟಿಕೆಟ್ ಕೊಡಲಾಗಿತ್ತು. ನಾಮಪತ್ರ ಸಲ್ಲಿಕೆ ಮಾಡಿದ್ದರೂ ರಾಜಣ್ಣ ಪ್ರಚಾರದಲ್ಲಿ ತೊಡಗಿಸಿಕೊಳ್ಳದೆ ಕಳೆದ ಎರಡು ಮೂರು ದಿನಗಳಿಂದ ಕಾರ್ಯಕರ್ತರ ಕೈಗೆ ಸಿಗುತ್ತಿಲ್ಲ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular