HomeKarnatakaಜೆಡಿಎಸ್ ಗೆ ಮತ್ತೊಂದು ಶಾಕ್: ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಜೆಡಿಎಸ್ ಗೆ ಮತ್ತೊಂದು ಶಾಕ್: ಕೊನೆ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಅಭ್ಯರ್ಥಿ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕಣದಿಂದ ಹಿಂದೆ ಸರಿದಿರುಗುವುದಾಗಿ ಘೋಷಿಸಿದ್ದಾರೆ.

ಸಾಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರನ್ನು ಬೆಂಬಲಿಸುವ ನಿಟ್ಟಿನಲ್ಲಿ ಕಣದಿಂದ ಹಿಂದೆ ಸರಿದಿರುವುದಾಗಿ ಜೆಡಿಎಸ್ ಅಭ್ಯರ್ಥಿ ಸೈಯದ್ ಜಾಕೀರ್ ಸೋಮವಾರ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾನು ಜೆಡಿಎಸ್ ಪಕ್ಷವನ್ನು ತೊರೆದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ. ವೈಯಕ್ತಿಕವಾಗಿ ಕಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಕನ್ನಪ್ಪ ಬೆಳಲಮಕ್ಕಿ ಅವರು, ಕಣದಿಂದ ಸೈಯದ್ ಜಾಕಿರ್ ಹಿಂದೆ ಸರಿದಿರುವುದು ಅವರ ವೈಯಕ್ತಿಕ ತೀರ್ಮಾನವಾಗಿದೆ. ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ. ಅವರು ಕಣದಿಂದ ಹಿಂದೆ ಸರಿದ ಕುರಿತು ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular