ಜೆಡಿಎಸ್ ಗೆ ಬಿಗ್ ಶಾಕ್: ಚುನಾವಣೆಗೆ ಮೊದಲೇ ಮತ್ತೊಂದು ವಿಕೆಟ್ ಪತನ; ಕಾಂಗ್ರೆಸ್ ಬೆಂಬಲಿಸಿ ಅಭ್ಯರ್ಥಿಯಿಂದ ನಾಮಪತ್ರ ವಾಪಸ್

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಮೊದಲೇ ಜೆಡಿಎಸ್ ಪಕ್ಷದ ಮತ್ತೊಂದು ವಿಕೆಟ್ ಪತನವಾಗಿದೆ. ವೋಟರ್ ಐಡಿ ಇಲ್ಲದ ಕಾರಣ ಶಿವಾಜಿನಗರದಲ್ಲಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿತ್ತು. ಈಗ ಗೋಕಾಕ್ ಕ್ಷೇತ್ರದಲ್ಲಿ ಅಭ್ಯರ್ಥಿಯೇ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿಸಿ ಜೆಡಿಎಸ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಮಾಜಿ ಸಚಿವ ಬಿಜೆಪಿಯ ರಮೇಶ ಜಾರಕಿಹೊಳಿ ಅವರ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ವಿರೋಧಿಗಳೆಲ್ಲರೂ ಒಂದಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿ ಚೆನ್ನಬಸಪ್ಪ ಗಿಡ್ಡನವರ ನಾಮಪತ್ರ ಹಿಂಪಡೆಯುವ ಮೂಲಕ ಕಣದಿಂದ ಹಿಂದೆ ಸರಿದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಬೆಂಬಲ ಘೋಷಿಸಿದ್ದಾರೆ.

ಈ ಮೂಲಕ ವಿಧಾನಸಭೆ ಚುನಾವಣೆಗೆ ಮೊದಲೇ ಜೆಡಿಎಸ್ ಪಕ್ಷದ ಒಂದು ವಿಕೆಟ್ ಪತನವಾಗಿದೆ. ಪಕ್ಷದ ನಾಯಕರ ಗಮನಕ್ಕೆ ಬಾರದೆ ಅಭ್ಯರ್ಥಿ ನಾಮಪತ್ರ ಹಿಂಪಡೆದುಕೊಂಡಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ನಾಯಕರು ಚನ್ನಬಸಪ್ಪ ಗಿಡ್ಡನವರ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಮುಂದಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read