HomeKarnatakaಹಾಸನ ಕ್ಷೇತ್ರದ ಅಭ್ಯರ್ಥಿ ಸೇರಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ನಾಳೆಯೊಳಗೆ ಬಿಡುಗಡೆ

ಹಾಸನ ಕ್ಷೇತ್ರದ ಅಭ್ಯರ್ಥಿ ಸೇರಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ನಾಳೆಯೊಳಗೆ ಬಿಡುಗಡೆ

ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಈಗಾಗಲೇ ಸಿದ್ಧವಾಗಿದ್ದು, ನಾಳೆಯೊಳಗೆ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಬಗ್ಗೆ ಮಾಹಿತಿ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ದೇವೇಗೌಡರು ದೆಹಲಿ ಪ್ರವಾಸದಲ್ಲಿದ್ದು, ಬುಧವಾರ ಸಂಜೆ ವಾಪಸಾಗಲಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು. ಪಟ್ಟಿಯಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿಯ ಹೆಸರು ಇರುತ್ತದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಾಸನ ಕ್ಷೇತ್ರದ ಅಭ್ಯರ್ಥಿಯ ಹೆಸರನ್ನು ಒಳಗೊಂಡಂತೆ ಎರಡನೇ ಪಟ್ಟಿ ಬಿಡುಗಡೆಯಾಗಲಿದೆ. ಹಾಸನ ವಿಚಾರವಾಗಿ ಜೆಡಿಎಸ್ ಪಕ್ಷಕ್ಕೆ ಹೆಚ್ಚು ಪ್ರಚಾರ ದೊರೆತಿದ್ದು, ಇದರಿಂದ ಪಕ್ಷಕ್ಕೆ ಎರಡರಿಂದ ಮೂರರಷ್ಟು ಮತ ಪ್ರಮಾಣ ಹೆಚ್ಚಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular