HomeKarnatakaಲೋಕಸಭಾ ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಬಿಗ್ ಶಾಕ್; ನಗರಸಭೆ 10 ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಲೋಕಸಭಾ ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಬಿಗ್ ಶಾಕ್; ನಗರಸಭೆ 10 ಸದಸ್ಯರು ಕಾಂಗ್ರೆಸ್ ಸೇರ್ಪಡೆ

ರಾಮನಗರ: ಲೋಕಸಭಾ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್ ಎದುರಾಗಿದೆ. ನಗರಸಭೆಯ 10 ಸದಸ್ಯರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿರೋಧಿಸಿ ಚನ್ನಪಟ್ಟಣ ನಗರ ಸಭೆಯ ಎಲ್ಲಾ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಜೆಡಿಎಸ್ ಪಕ್ಷದ ಚಿಹ್ನೆಯ ಮೇಲೆ ನಗರ ಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 9 ಜನ ಸದಸ್ಯರು ಹಾಗೂ ಚನ್ನಪಟ್ಟಣದ ವಾರ್ಡ್ ನಂ.‌30 ರ ಪಕ್ಷೇತರ ಅಭ್ಯರ್ಥಿ ಸೇರಿ 10 ಸದಸ್ಯರು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚನ್ನಪ್ಪಟ್ಟನ ನಗರ ಸಭೆಯ ಅಧ್ಯಕ್ಷ ಪ್ರಶಾಂತ್ ಪಿ.‌ ಸದಸ್ಯರಾದ ರೇವಣ್ಣ ಎಂ.ಜೆ, ವಿ ಸತೀಸ್ ಬಾಬು, ಶ್ರೀನಿವಾಸಮೂರ್ತಿ. ಲೋಕೇಶ್ ಸಿ.ಜೆ., ನಾಗೇಶ್‌, ಸೈಯದ್ ರಪೀಕ್ ಅಹಮದ್ ಕುನುಮೀರಿ, ಅಭೀದ ಬಾನು, ಭಾನುಪ್ರೀಯ ಹಾಗೂ ಪಕ್ಷೇತರ ಸದಸ್ಯೆ ಉಮಾ ಸೇರಿದಂತೆ ಎಲ್ಲಾ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular