HomeKarnatakaಶಾಸಕ ಶ್ರೀನಿವಾಸ್ ಪಕ್ಷ ತೊರೆದ ಬೆನ್ನಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: ಪ.ಪಂ. ಸದಸ್ಯರಿಂದ ಕಾಂಗ್ರೆಸ್...

ಶಾಸಕ ಶ್ರೀನಿವಾಸ್ ಪಕ್ಷ ತೊರೆದ ಬೆನ್ನಲ್ಲೇ ಜೆಡಿಎಸ್ ಗೆ ಮತ್ತೊಂದು ಶಾಕ್: ಪ.ಪಂ. ಸದಸ್ಯರಿಂದ ಕಾಂಗ್ರೆಸ್ ಗೆ ಬಾಹ್ಯ ಬೆಂಬಲ

ತುಮಕೂರು: ಗುಬ್ಬಿ ಜೆಡಿಎಸ್ ಶಾಸಕರಾಗಿದ್ದ ಎಸ್ ಆರ್.  ಶ್ರೀನಿವಾಸ್ ಜೆಡಿಎಸ್ ಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಜೆಡಿಎಸ್ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ.

ಎಸ್.ಆರ್. ಶ್ರೀನಿವಾಸ ಅವರಿಗೆ ಗುಬ್ಬಿ ಪಟ್ಟಣ ಪಂಚಾಯಿತಿ ಜೆಡಿಎಸ್ ಸದಸ್ಯರು ಬಾಹ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಗುಬ್ಬಿ ಪಟ್ಟಣ ಪಂಚಾಯಿತಿ ಜೆಡಿಎಸ್ ಪಕ್ಷದ 9 ಸದಸ್ಯರು ಕಾಂಗ್ರೆಸ್ ಗೆ ಬಾಹ್ಯ ಬೆಂಬಲ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮಗೆ ಜೆಡಿಎಸ್ ಪಕ್ಷದ ಮೇಲೆ ಯಾವುದೇ ಅಸಮಾಧಾನ ಇಲ್ಲ. ಗುಬ್ಬಿ ಜೆಡಿಎಸ್ ಅಭ್ಯರ್ಥಿ ನಾಗರಾಜ್ ಮೇಲೆ ಮಾತ್ರ ಅಸಮಾಧಾನ ಇದೆ. ವಿವಿಧ ಸಭೆ ಸಮಾರಂಭಗಳಿಗೆ ಆಹ್ವಾನ ನೀಡದೆ ನಿರ್ಲಕ್ಷ ತೋರಿದ್ದಾರೆ. ಹಾಗಾಗಿ ಜೆಡಿಎಸ್ ಪಕ್ಷದಲ್ಲಿದ್ದುಕೊಂಡೇ ಕಾಂಗ್ರೆಸ್ ಗೆ ಬೆಂಬಲ ಕೊಡುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular