ಬೆಂಗಳೂರು ಬಂದ್ ಗೆ ‘ಜೆಡಿಎಸ್’ ಸಂಪೂರ್ಣ ಬೆಂಬಲವಿದೆ : ಮಾಜಿ ಪ್ರಧಾನಿ ‘HDD’

ಬೆಂಗಳೂರು : ಇಂದು ಸೆ.26 ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವುದನ್ನು ವಿರೋಧಿಸಿ ಇಂದು ನಡೆಯುತ್ತಿರುವ ಬೆಂಗಳೂರು ಬಂದ್ ಗೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ. ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದ್ ನಲ್ಲಿ ಭಾಗವಹಿಸಬೇಕಾಗಿ ವಿನಂತಿಸಿಕೊಳ್ಳುತ್ತೇವೆ. ನ್ಯಾಯಕ್ಕಾಗಿ ನಡೆಸುವ ಹೋರಾಟ ಶಾಂತಿಯುತವಾಗಿರಲಿ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

ಕೃಷ್ಣರಾಜಸಾಗರ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ನಡುವೆ ನಡೆಯುತ್ತಿರುವ ವಿವಾದಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಪರಿಹರಿಸಲು ಮಧ್ಯಸ್ಥಿಕೆ ವಹಿಸುವಂತೆ ಕೋರಿ ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೇನೆ ಎಂದು ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

https://twitter.com/H_D_Devegowda/status/1706521280923816371

TAGGED:
Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read