HomeKarnatakaBREAKING: ಕಾಂಗ್ರೆಸ್ ಕೆಟ್ಟ ಆಡಳಿತದಿಂದ ಜೆಡಿಎಸ್ ಗೆ ಉತ್ತಮ ಭವಿಷ್ಯ, ಬಿಜೆಪಿ ಜೊತೆ ಸರ್ಕಾರ ರಚನೆ:...

BREAKING: ಕಾಂಗ್ರೆಸ್ ಕೆಟ್ಟ ಆಡಳಿತದಿಂದ ಜೆಡಿಎಸ್ ಗೆ ಉತ್ತಮ ಭವಿಷ್ಯ, ಬಿಜೆಪಿ ಜೊತೆ ಸರ್ಕಾರ ರಚನೆ: HDK

ಮೈಸೂರು: ಮುಂದೆ ಬಿಜೆಪಿ ಜೊತೆಗೆ ಸೇರಿ ಸರ್ಕಾರ ರಚಿಸುತ್ತೇವೆ. ಆಗ ನಾವು ರಾಮ ರಾಜ್ಯದ ಸರ್ಕಾರ ಮಾಡಬಹುದಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮೈಸೂರಿನ ಸಾ.ರಾ. ಕಲ್ಯಾಣ ಮಂದಿರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಾನು ರಾಮ ರಾಜ್ಯ ಮಾಡದಿದ್ದರೆ ರಾಜಕಾರಣದಲ್ಲಿ ಇರುವುದಿಲ್ಲ ನಾನು ಖಜಾನೆ ಲೂಟಿ ಮಾಡಿ ಹಣ ಮಾಡಿಲ್ಲ, ದುಡಿದು ಸಂಪಾದಿಸಿದ್ದೇನೆ. ವರ್ಷಕ್ಕೆ ಒಂದೂವರೆ ಕೋಟಿ ಸಂಪಾದನೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಮುಂದಿನ ಬಾರಿ ಬಿಜೆಪಿ -ಜೆಡಿಎಸ್ ಸರ್ಕಾರ ತಪ್ಪಿಸಲು ಸಾಧ್ಯವಿಲ್ಲ. 2028ಕ್ಕೆ ಅಧಿಕಾರಕ್ಕೆ ಬರುತ್ತೇವೆ ಎಂದು ಕಾಂಗ್ರೆಸ್ ನವರು ಹೇಳುತ್ತಾರೆ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದ್ದೇ ಅಂತಿಮ ಅಲ್ಲ, ಉಪಚುನಾವಣೆಯಲ್ಲಿ ಆಡಳಿತ ಪಕ್ಷ ಗೆಲ್ಲುವುದು ಸಾಮಾನ್ಯ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

18 ಶಾಸಕರನ್ನು ಕರೆದೊಯ್ದಿದ್ದ ವೇಳೆ ಬಿಜೆಪಿ 17 ಸ್ಥಾನದಲ್ಲಿ ಗೆದ್ದಿತ್ತು. ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿ ಎಷ್ಟು ಸ್ಥಾನ ಪಡೆದರು? 2023ರಲ್ಲಿ ಬಿಜೆಪಿಗೆ ಆದ ಪರಿಸ್ಥಿತಿ ಕಾಂಗ್ರೆಸ್ ಪಕ್ಷಕ್ಕೂ ಬರುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಗೆ ಉತ್ತಮ ಭವಿಷ್ಯವಿದೆ. ಇದಕ್ಕೆ ಕಾರಣ ಕಾಂಗ್ರೆಸ್ ಸರ್ಕಾರದ ಕೆಟ್ಟ ಆಡಳಿತ. ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಕಾಂಗ್ರೆಸ್ ನವರೇ ಅವಕಾಶ ಮಾಡಿಕೊಡುತ್ತಾರೆ ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular