HomeKarnatakaಸಾಲು-ಸಾಲು ಚುನಾವಣೆಗಳ ಹೊತ್ತಲ್ಲಿ ಮಹತ್ವದ ಬದಲಾವಣೆ ಮಾಡಿದ ಜೆಡಿಎಸ್!

ಸಾಲು-ಸಾಲು ಚುನಾವಣೆಗಳ ಹೊತ್ತಲ್ಲಿ ಮಹತ್ವದ ಬದಲಾವಣೆ ಮಾಡಿದ ಜೆಡಿಎಸ್!

ಸ್ಥಳೀಯ ಸಂಸ್ಥೆಗಳ ಚುನಾವಣೆ, ಎರಡು ಕ್ಷೇತ್ರಗಳ ಉಪ ಚುನಾವಣೆ ಮತ್ತು ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ) ಚುನಾವಣೆಗಳ ಹಿನ್ನಲೆಯಲ್ಲಿ ಜಾತ್ಯಾತೀತ ಜನತಾದಳ (ಜೆಡಿಎಸ್) ಪಕ್ಷ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ.

ಈ ಕುರಿತು ಜೆಡಿಎಸ್ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಲಾಗಿದೆ. 2025ರ ನವೆಂಬರ್‌ನಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷರಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವಿರೋಧ ಆಯ್ಕೆಯಾಗಿದ್ದರು.

ಸೋಮವಾರ ಪಕ್ಷದ ಫೇಸ್‌ಬುಕ್ ಖಾತೆಯಲ್ಲಿ ಈ ಕೆಳಕಂಡ ಜಿಲ್ಲೆಗಳಲ್ಲಿ ನಡೆದ ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ನೂತನ ಜಿಲ್ಲಾಧ್ಯಕ್ಷರುಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೌದು, ಸಾಲು ಸಾಲು ಚುನಾವಣೆಗಳು ಎದುರಾಗುತ್ತಿರುವಾಗ ಕರ್ನಾಟಕದಲ್ಲಿ 18 ಶಾಸಕರ ಬಲ ಹೊಂದಿರುವ ಜೆಡಿಎಸ್ ಪಕ್ಷ 20 ನೂತನ ಜಿಲ್ಲಾಧ್ಯಕ್ಷರನ್ನು ಘೋಷಣೆ ಮಾಡಿದೆ. ಈ ಮೂಲಕ ಪಕ್ಷ ಸಂಘಟನೆಗೆ ಚುರುಕು ಮುಟ್ಟಿಸಲಾಗಿದೆ.

ಜಿಲ್ಲೆಗಳನ್ನು ಬೆಂಗಳೂರು ವಿಭಾಗ, ಮೈಸೂರು ವಿಭಾಗ, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಎಂದು ವಿಭಾಗ ಮಾಡಲಾಗಿದ್ದು, ಹೊಸ ಜಿಲ್ಲಾಧ್ಯಕ್ಷರ ಹೆಸರುಗಳನ್ನು ಪ್ರಕಟಿಸಲಾಗಿದೆ.

ನೂತನ ಜಿಲ್ಲಾಧ್ಯಕ್ಷರ ಪಟ್ಟಿ

  • ಚಿತ್ರದುರ್ಗ – ಕೆ.ಮಂಜುನಾಥ್
  • ಬೆಂಗಳೂರು ದಕ್ಷಿಣ ಜಿಲ್ಲೆ – ಜಯಮುತ್ತು
  • ಬೆಂಗಳೂರು ಗ್ರಾಮಾಂತರ – ಕೆ.ವಿ.ಮಂಜುನಾಥ್
  • ಶಿವಮೊಗ್ಗ – ರಾಮಕೃಷ್ಣ ಕೆ.ಎನ್.

ಮೈಸೂರು ವಿಭಾಗ

  • ಮೈಸೂರು ಗ್ರಾಮಾಂತರ –  ಅಶ್ವಿನ್ ಕುಮಾರ್ ಎಂ.
  • ಮೈಸೂರು ನಗರ – ಎಸ್‌.ಬಿ.ಎಂ. ಮಂಜು
  • ಮಂಡ್ಯ – ಡಿ.ರಮೇಶ್
  • ದಕ್ಷಿಣ ಕನ್ನಡ – ಜಾ.ಕೆ. ಮಾಧವ ಗೌಡ
  • ಉಡುಪಿ – ಯೋಗೇಶ್ ವಿ.ಶೆಟ್ಟಿ

ಕಿತ್ತೂರು ಕರ್ನಾಟಕ

  • ಬೆಳಗಾವಿ ಲೋಕಸಭಾ ಕ್ಷೇತ್ರ –  ಶಂಕರ ಭರಮಪ್ಪ ಮಾಡಲಗಿ
  • ಬಾಗಲಕೋಟೆ – ಹನುಮಂತ್ ಬಿ. ಮಾವಿನಮರದ
  • ಧಾರವಾಡ ಗ್ರಾಮಾಂತರ – ಬಿ.ಬಿ.ಗಂಗಾಧರ ಮಠ
  • ಹುಬ್ಬಳ್ಳಿ-ಧಾರವಾಡ – ಗುರುರಾಜ ಹುಣಶಿಮರದ
  • ಹಾವೇರಿ – ಮಂಜುನಾಥ್ ಎಸ್. ಗೌಡ ಶಿವಣ್ಣನವರ್
  • ಉತ್ತರ ಕನ್ನಡ – ಸೂರಜ್ ನಾಯಕ್ ಸೋನಿ

ಕಲ್ಯಾಣ ಕರ್ನಾಟಕ

  • ಬೀದರ್ – ರಮೇಶ್ ಪಾಟೀಲ್ ಸೋಲಾಪುರ್
  • ಬಳ್ಳಾರಿ – ಮೀನಳ್ಳಿ ತಾಯಣ್ಣ
  • ವಿಜಯನಗರ – ಮೃತ್ಯುಂಜಯ
  • ಕೊಪ್ಪಳ – ಸುರೇಶ್ ಭೂಮರೆಡ್ಡಿ

ಜೆಡಿಎಸ್‌ ಈಗ ಎನ್‌ಡಿಎ ಮೈತ್ರಿಕೂಟದ ಮಿತ್ರ ಪಕ್ಷ. 2024ರ ಲೋಕಸಭೆ ಚುನಾವಣೆಯ ಸಮಯದಿಂದ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಸೀಟು ಹಂಚಿಕೆ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ.

ಆದರೆ ಈಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಉಭಯ ಪಕ್ಷಗಳ ಮೈತ್ರಿ ಬಗ್ಗೆ ಅಪಸ್ವರ ಕೇಳಿ ಬರುತ್ತಿದೆ. ಅದರಲ್ಲೂ ಬಿಜೆಪಿ ಮತ್ತು ಜೆಡಿಎಸ್ ಪ್ರಬಲವಾಗಿರುವ ಜಿಲ್ಲೆಗಳಲ್ಲಿ ಮೈತ್ರಿ ಬೇಡ ಎಂದು ನಾಯಕರು ಹೇಳಿಕೆಗಳನ್ನು ನೀಡುತ್ತಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಮತ್ತು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, “ಮುಂದಿನ ವಿಧಾನಸಭೆ ಚುನಾವಣೆಯಲ್ಲೂ ಜೆಡಿಎಸ್– ಬಿಜೆಪಿ ಮೈತ್ರಿ ಮುಂದುವರಿಯಲಿದೆ” ಎಂದು ಹೇಳಿದ್ದಾರೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂ ಗೌಡ ಮಂಡ್ಯದಲ್ಲಿ ಮಾತನಾಡಿ, “ಮಂಡ್ಯ ಮತ್ತು ಹಾಸನ ಜಿಲ್ಲೆಗಳಲ್ಲಿ ಬಿಜೆಪಿ ಶಕ್ತಿಯುತವಾಗಿದೆ. ಎರಡೂ ಜಿಲ್ಲೆಗಳಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಸ್ವತಂತ್ರವಾಗಿ ಎದುರಿಸೋಣ ಎನ್ನುವುದು ಮುಖಂಡರು, ಕಾರ್ಯಕರ್ತರ ಅಭಿಪ್ರಾಯವಾಗಿದೆ” ಎಂದು ಹೇಳಿದ್ದರು.

“ಕಳೆದ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಯಲ್ಲೇ ಬಿಜೆಪಿ ಶಕ್ತಿಶಾಲಿಯಾಗಿದೆ ಎನ್ನುವುದು ಜೆಡಿಎಸ್‌ಗೂ ತಿಳಿದಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಹ ಅಭಿಪ್ರಾಯವನ್ನು ತಿಳಿಸಿದ್ದಾರೆ. ಅದನ್ನು ನಾಯಕರಿಗೆ ತಿಳಿಸಲಾಗುತ್ತದೆ” ಎಂದರು. 

ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಬೆಂಗಳೂರು ನಗರದ 5 ನಗರ ಪಾಲಿಕೆಗಳ ಮಟ್ಟದಲ್ಲಿ ಸೀಟು ಹಂಚಿಕೆ ಕಗ್ಗಂಟಾಗುವ ಕಾರಣಕ್ಕೆ ಉಭಯ ಪಕ್ಷಗಳು ಸ್ವತಂತ್ರವಾಗಿ ಚುನಾವಣೆ ಎದುರಿಸುವ ನಿರೀಕ್ಷೆ ಇದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular