HomeEntertainmentಸಿನಿಮಾ ರಂಗಕ್ಕೆ ಕಾಲಿಟ್ಟ ಜೆಡಿಎಸ್ ನಾಯಕ ಸಾರಾ ಮಹೇಶ್

ಸಿನಿಮಾ ರಂಗಕ್ಕೆ ಕಾಲಿಟ್ಟ ಜೆಡಿಎಸ್ ನಾಯಕ ಸಾರಾ ಮಹೇಶ್

ಕರ್ನಾಟಕ  ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಸಿನಿಮಾ ಕ್ಷೇತ್ರದ ಅನೇಕರು ರಾಜಕೀಯಕ್ಕೆ ಬಂದಿದ್ದಾರೆ. ರಾಜಕೀಯ, ಸಿನಿಮಾ ಎರಡೂ ಕಡೆ ಸಕ್ರಿಯವಾಗಿರುವವರು ಇದ್ದಾರೆ. ತಮಿಳುನಾಡಿನಲ್ಲಿ ನಟ ವಿಜಯ್ ಟಿವಿಕೆ ಪಕ್ಷವನ್ನು ಸ್ಥಾಪಿಸಿ ರಾಜಕೀಯದಲ್ಲಿ ಅದೃಷ್ಟ ಪರೀಕ್ಷೆ ಮುಂದಾಗಿದ್ದಾರೆ.

ಕರ್ನಾಟಕದಲ್ಲಿ ಮಾಜಿ ಸಚಿವ, ಜೆಡಿಎಸ್ ನಾಯಕ ಸಾರಾ ಮಹೇಶ್ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೌದು ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ರೀತಿಯಲ್ಲಿ ಅವರು ನಿರ್ಮಾಪಕರಾಗಿ ಚಿತ್ರರಂಗಕ್ಕೆ ಬರುತ್ತಿದ್ದಾರೆ.

ಮೈಸೂರು ಜಿಲ್ಲೆಯ ಪ್ರಭಾವಿ ನಾಯಕ, ಕೆ.ಆರ್.ನಗರ ಕ್ಷೇತ್ರದ ಮಾಜಿ ಶಾಸಕ ಸಾರಾ ಮಹೇಶ್ ಗೌರಿ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಹೊಸ ತಂಡದ ಪ್ರಯತ್ನಕ್ಕೆ ಮಾಜಿ ಸಚಿವರು ಬೆಂಬಲವಾಗಿ ನಿಲ್ಲುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಏಳುಮಲೆ’ ಸಿನಿಮಾ ಖ್ಯಾತಿಯ ಪ್ರಿಯಾಂಕಾ ನಾಯಕಿಯಾಗಿರುವ ಚಿತ್ರವಿದು. ಈ ಚಿತ್ರದ ಮೂಲಕ ಕನ್ನಡದ ಸೂಪರ್ ಹಿಟ್ ಚಿತ್ರ ‘ಯಾರೇ ನೀನು ಚೆಲುವೆ’ಯ ನಾಯಕಿ ಸಂಗೀತ ಮಾಧವನ್ ಕನ್ನಡಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ನಟ ಸುದೀಪ್ ಶಿಷ್ಯ ಕಿರಣ್ ವಿಶ್ವನಾಥ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಕುರಿತು ಹೆಚ್ಚಿನ ಅಪ್‌ಡೇಟ್‌ಗಳು ಇನ್ನೂ ಸಹ ಬರಬೇಕಿದೆ.

ಸಾರಾ ಮಹೇಶ್ ನಿರ್ಮಾಣ ಮಾಡುವ ಚಿತ್ರಕ್ಕೆ ಇನ್ನೂ ಹೆಸರು ಅಂತಿಮಗೊಳಿಸಿಲ್ಲ. ಆದರೆ ನಿರ್ಮಾಪಕರಾಗುವ ಮೂಲಕ ಹೊಸ ತಂಡದ ಪ್ರಯತ್ನಕ್ಕೆ ಸಾರಾ ಮಹೇಶ್ ಅವರು ಗೌರಿ ಆರ್ಟ್ಸ್ ಬ್ಯಾನರ್ ಮೂಲಕ ಬೆಂಬಲಕ್ಕೆ ನಿಂತಿದ್ದಾರೆ.

ಚಿತ್ರದ ನಿರ್ದೇಶಕ ಕಿರಣ್ ವಿಶ್ವನಾಥ್ ಕಿಚ್ಚ ಸುದೀಪ್ ಆಪ್ತ ಬಳಗದಲ್ಲಿದ್ದಾರೆ. ರನ್ನ, ವಿಕ್ಟರಿ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಈಗ ಈ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ.

ದೊಡ್ಡ ಕಾರ್ಯಕ್ರಮದ ಮೂಲಕ ಚಿತ್ರದ ನಾಯಕ ನಟ, ಹೆಸರು ಘೋಷಣೆ ಮಾಡುವ ಆಲೋಚನೆಯಲ್ಲಿದೆ ಚಿತ್ರತಂಡ. ಹೊಸ ಚಿತ್ರದ ಕುರಿತು ಇನ್ನೂ ಹೆಚ್ಚಿನ ಅಪ್‌ಡೇಟ್‌ಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ಚುನಾವಣೆ ಸೋಲು: ಸಾರಾ ಮಹೇಶ್ ಹಾಲಿ ಶಾಸಕರಲ್ಲ ಅವರು 2023ರ ಚುನಾವಣೆಯಲ್ಲಿ ಮೈಸೂರಿನ ಕೃಷ್ಣರಾಜನಗರ ಕ್ಷೇತ್ರದಲ್ಲಿ 78,863 ಮತಗಳನ್ನು ಪಡೆದು ಕಾಂಗ್ರೆಸ್‌ನ ರವಿಶಂಕರ್ ಡಿ. ವಿರುದ್ಧ ಸೋಲು ಕಂಡಿದ್ದಾರೆ.

ಸಾರಾ ಮಹೇಶ್ 2028ರ ಚುನಾವಣೆಯಲ್ಲಿ ಮೈಸೂರು ನಗರದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚುನಾವಣಾ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಕ್ಷೇತ್ರದ ಹಾಲಿ ಶಾಸಕ, ಜೆಡಿಎಸ್ ನಾಯಕ ಜಿ.ಟಿ.ದೇವೇಗೌಡ ಈಗಾಗಲೇ ಪಕ್ಷದ ಚಟುವಟಿಕೆಯಿಂದ ದೂರವಾಗಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular