ಬೆಳಗಾವಿ: ಜೆಡಿಎಸ್ ರಾಷ್ಟ್ರೀಯ ಉಪಾಧ್ಯಕ್ಷ ಪ್ರತಾಪ್ ರಾವ್ ಪಾಟೀಲ್ ಪುತ್ರ ಸೇರಿದಂತೆ 35 ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ.
ಪ್ರತಾಪ್ ಪಾಟೀಲ್ ಪುತ್ರ ಶಿವರಾಜ್ ಸೇರಿದಂತೆ 35 ಜನರ ವಿರುದ್ದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಗುಂಪುಕಟ್ಟಿಕೊಂಡು ಮಹಿಳೆ ಹಾಗೂ ವೃದ್ಧರ ಮೇಲೆ ಹಲ್ಲೆ ನಡೆಸಿ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಇಟ್ನಾಳದಲ್ಲಿ ಮಹಿಳೆ ಹಾಗೂ ವೃದ್ಧರ ಮೇಲೆ ಶಿವರಾಜ್ ಸೇರಿದಂತೆ ಹಲವರು ಹಲ್ಲೆ ನಡೆಸಿದ್ದರು. ಹಲ್ಲೆ ಪ್ರಕರಣದಲ್ಲಿ ಶಿವರಾಜ್ ಪ್ರಮುಖ ಆರೋಪಿಯಾಗಿದ್ದಾನೆ. ಈವರೆಗೂ ಇಬ್ಬರು ಆರೋಪಿಗಳನ್ನು ಮಾತ್ರ ಪೊಲೀಸರು ಬಂಧಿಸಿದ್ದು, ಶಿವರಾಜ್ ಸೇರಿ ಉಳಿದ ಆರೋಪಿಗಳನ್ನು ಬಂಧಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಗಾಯಾಳುಗಳನ್ನು ಗೋಕಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.