HomeKarnatakaಜೆಡಿಎಸ್ ಗೆ ಶಾಕ್: ಸಿ.ಎಂ. ಇಬ್ರಾಹಿಂ ಸಂಪರ್ಕದಲ್ಲಿ ಐವರು ಶಾಸಕರು

ಜೆಡಿಎಸ್ ಗೆ ಶಾಕ್: ಸಿ.ಎಂ. ಇಬ್ರಾಹಿಂ ಸಂಪರ್ಕದಲ್ಲಿ ಐವರು ಶಾಸಕರು

ಬೆಂಗಳೂರು: ಜೆಡಿಎಸ್ ಪಕ್ಷದ ಐವರು ಶಾಸಕರು ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಪಕ್ಷದ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮಾತು ಕೇಳದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಸದ್ಯ ಐವರು ಶಾಸಕರು ಸಂಪರ್ಕದಲ್ಲಿದ್ದು, ಈ ಸಂಖ್ಯೆ 12ಕ್ಕೆ ಏರಿಕೆಯಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಿಸೆಂಬರ್ 11ರ ನಂತರ ರಾಜ್ಯ ಪ್ರವಾಸ ಕೈಗೊಳ್ಳುತ್ತೇನೆ. ರಾಜ್ಯದಲ್ಲಿ ಮೂರನೇ ಶಕ್ತಿಯಾಗಿ ಬೆಳೆಯಲು ನಮಗೆ ಎಲ್ಲಾ ಅವಕಾಶಗಳಿದ್ದು, ಪಕ್ಷದ ವರಿಷ್ಠರಾದ ದೇವೇಗೌಡರು ನಮ್ಮ ಮಾತನ್ನು ಕೇಳದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular